ಸ್ವಂತ ತಂದೆಯಿಂದಲೇ ಮಗಳ ಅ ತ್ಯಾಚಾರ, ಮುದ್ದಿನ ಮಗಳ ಜೀವನ ನುಂಗಿದ ಕಾ ಮುಕ
Mar 14, 2025, 08:53 IST

ನಾವೆಲ್ಲ ಕೇಳಿರೋ ಹಾಗೆ ಹೆಣ್ಣುಮಕ್ಕಳಿಗೆ ಅಪ್ಪನೇ ಸೂಪರ್ ಹೀರೋ ಎಂಬ ಮಾತುಗಳು ನಾವು ಹಾಗಾಗ ಕೇಳುತ್ತಿರುತ್ತೇವೆ. ಅದರಂತೆ ಹೆಣ್ಣುಮಕ್ಕಳು ಸಹ ತಾಯಿಗಿಂತ ಅಪ್ಪನ ಮೇಲೆ ವಿಶೇಷ ಪ್ರೀತಿಯನ್ನು ಹೊಂದಿರುತ್ತಾರೆ. ಆದರೆ ಇಲ್ಲೋರ್ವ ವ್ಯಕ್ತಿ ಅಪ್ಪ ಎಂಬ ಪದಕ್ಕೆ ಮಸಿ ಬಳಿದಿದ್ದಾನೆ. ಮಗಳು ಎನ್ನುವುದನ್ನು ನೋಡದೇ ತಂದೆಯೇ ಆಕೆ ಮೇಲೆ ತನ್ನ ವಿಕೃತ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಪರಿಣಾಮ ಇದೀಗ ಮಗಳು ಗರ್ಭಿಣಿಯಾಗಿದ್ದಾಳೆ.
ಹೌದು ಅನ್ಯರಿಂದ, ಕೆಟ್ಟ ದೃಷ್ಟಿಯಿಂದ ಮಗಳನ್ನ ಕಾಪಾಡಬೇಕಿದ್ದ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದಾನೆ. ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳಿನಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಮಗಳು ಗರ್ಭಿಣಿಯಾಗಿದ್ದಾಳೆ. ಯುವತಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದಾಗ ತಂದೆಯ ವಿಕೃತ ಕಾಮ ಬೆಳಕಿಗೆ ಬಂದಿದೆ.
ಇನ್ನು ಅಪ್ಪಯ್ಯಪ್ಪಗೆ ಮೂರು ಹೆಣ್ಣು ಒಂದು ಗಂಡು ಮಗು ಇದ್ದು, ತಾಯಿ ಇಲ್ಲದ ಮಕ್ಕಳನ್ನು ತಾನೇ ನೋಡಿಕೊಳ್ಳುತ್ತಿದ್ದ. ಮೊದಲ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಕೊಟ್ಟಿದ್ದಾನೆ. ಆದ್ರೆ, 20 ವರ್ಷದ ಮೂರನೇ ಮಗಳ ಮೇಲೆ ತನ್ನ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಮಗಳು ಎನ್ನುವುದನ್ನು ನೋಡದೇ ನಿರಂತರವಾಗಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಯುವತಿ ಗರ್ಭಿಣಿಯಾಗಿದ್ದಾಳೆ.
ಅಪ್ಪಯ್ಯಪ್ಪ ತನ್ನ 20 ವರ್ಷದ ಮಗಳ ಮೇಲೆ ನಿರಂತರವಾಗಿ 5 ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಬಳಿಕ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದು, ಆಗ ವೈದ್ಯರು ಪರೀಕ್ಷೆ ನಡೆಸಿದ ವೇಳೆ ಯುವತಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಬಳಿಕ ಮಗಳ ತಂದೆ ಅಪ್ಪಯ್ಯಪ್ಪ ವಿರುದ್ಧ ದೂರು ನೀಡಿದ್ದು, ಈ ದೂರಿನ ಮೇರೆಗೆ ಕಾಮಸಮುದ್ರ ಪೊಲೀಸರು ಅಪ್ಪಯ್ಯಪ್ಪನನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.