ಮಂಗಳೂರಲ್ಲೊಂದು ವಿಚಿತ್ರ ಘಟನೆ, ವಧುವಿನ ತಾಳಿ ಕಟ್ಟುವ ಒಂದು ಘಂಟೆ ಮುಂಚೆ ಹಳೆ ಪ್ರೇಯಸಿ ಎಂಟ್ರಿ, ಆಮೇಲೆ ಆಗಿದ್ದೇ ಬೇರೆ

 

ಈಗೀಗ ಪ್ರೀತಿ ಮಾಡೋದು ಹಾಗೂ ಮೋಸ ಮಾಡೋದು ಸಾಮಾನ್ಯ ಸಂಗತಿಯಾಗಿದೆ. ಹೌದು ಪ್ರೀತಿಗೆ ಕಣ್ಣಿಲ್ಲ ಎಂಬ ಮಾತು ನಿಜ ಅನ್ನಿಸಿಬಿಡುತ್ತದೆ. ಇದೀಗ ತನಗೆ ಮೋಸ ಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. 

ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಅಷ್ಟಕ್ಕೂ ಆಗಿದ್ದೇನು ಅಂದ್ರೆ ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. 

ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ. ಇನ್ನು ಆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. 

ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ. ನಂತರದಲ್ಲಿ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. 

ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ. ಒಟ್ಟಿನಲ್ಲಿ ಹೇಳುವುದಾದರೆ ಅಕ್ಷಯ್  ಮದುವೆ ಸುಖಾಂತ್ಯ ಕಂಡಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.