ಗಂಡ ಮಾಡಿದ ಹುಚ್ಚು ಕೆಲಸಕ್ಕೆ ಮಾನ ಕಳೆದುಕೊಂಡ ಪತ್ನಿ

 

ಹೆಣ್ಣು ಸ್ವಾವಲಂಬಿ ಬದುಕಿಗೆ ಹೋರಾಟ ನಡೆಸಿ ಸ್ವಾತಂತ್ರ್ಯ ಪಡೆದು ನೆಮ್ಮದಿಯ ಜೀವನ ನಡೆಸುತ್ತಿದ್ದಾಳೆ ಎಂದು ಘಂಟಾಗೋಷ ಕೂಗುವ ಮಹಿಳಾ ಮಣಿಗಳು ಒಂದೆಡೆ ಆದರೆ ಜಿಲ್ಲೆಯಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ.  ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳನ್ನು ವೀಡಿಯೋ ರೆಕಾರ್ಡ್ ಮಾಡಿ. ಮತ್ತೆ ಹೆಂಡತಿಗೆ ಗಂಡನೇ ಬ್ಲ್ಯಾಕ್ ಮೇಲ್  ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.

ಹೌದು. ಮದುವೆಗಾಗಿ ಹೆಂಡತಿಯಿಂದ ವಿಚ್ಛೇದನ ಪಡೆಯಲು ಬೆಳಗಾವಿ  ನಗರದ ನಿವಾಸಿ ಕಿರಣ್ ಪಾಟೀಲ್ ಎಂಬಾತ ಈ ರೀತಿ ಕೃತ್ಯ ಎಸಗಿದ್ದಾನೆ.  ವಿಚ್ಛೇದನ ನೀಡು ಇಲ್ಲವಾದರೆ ಅಶ್ಲೀಲ ವೀಡಿಯೋ, ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಗಂಡನ ಮಾತನ್ನು ಕೇಳಿ ಹೆಂಡತಿ ಶಾಕ್‌ಗೆ ಒಳಗಾಗಿದ್ದಾರೆ. ಸಾಕಷ್ಟು ಬಾರಿ ಮನವೊಲಿಸಲು ಯತ್ನಿದ್ರೂ ಯಾವುದೇ ಪ್ರಯೋಜನವಾಗಿಲ್ಲ. <a href=https://youtube.com/embed/pEccHL9fRZ0?autoplay=1&mute=1><img src=https://img.youtube.com/vi/pEccHL9fRZ0/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಇತ್ತ ವಿಚ್ಛೇದನ ಕೋರಿ ಗಂಡ ಕಿರಣ್ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಇನ್ನು ಕೋರ್ಟಿಗೆ ಹೋದ ಬಳಿಕವೂ ಹೆಂಡತಿಗೆ ನಿರಂತರವಾಗಿ ಕಿರಣ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಇದರಿಂದ ದಿಕ್ಕೆ ತೋಚದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ನೊಂದ ಮಹಿಳೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ಠಾಣೆಗೆ ಕಿರಣ್ ಪಾಟೀಲ್ ಅವರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. 

ಈ ವೇಳೆ ಆತನ ಮೊಬೈಲ್ ನಲ್ಲಿ ಹೆಂಡತಿ ಅಶ್ಲೀಲ ವೀಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಬಂಧಿಸಲು ಮುಂದಾದಾಗ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ರಕ್ಷಣೆ ಮಾಡಿದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಹಿಂಡಲಗಾ ಜೈಲಿಗೆ ಆರೋಪಿ ಕಿರಣನನ್ನು ರವಾನಿಸಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.