ಶಿವಜಿ ಯಾರೀ, ಈ ಭೂಮಿ ನಿಜಾಮಾರಿಗೆ ಎಂದು ಅಲ್ಲಾ ಮೊದಲೇ ಹೇಳಿದ್ದಾನೆ
Nov 10, 2024, 21:56 IST
ಇನ್ನೇನು ಕೆಲ ದಿನಗಳಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮವೂ ಜೋರಾಗಿದೆ. ಜೊತೆಗೆ ರಾಜಕೀಯ ಪಕ್ಷಗಳು ಭರ್ಜರಿ ಚುನಾವಣಾ ಪ್ರಚಾರದಲ್ಲೂ ತೊಡಗಿವೆ. ಇದೀಗ ಒವೈಸಿ ಪ್ರಚಾರ ರ‍್ಯಾಲಿಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ .
ಇದು ಔರಂಗಬಾದ್ ನಗರ ಇದರ ಹೆಸರನ್ನು ಸಂಭಾಜಿ ನಗರ ಎಂದು ಬದಲಾಯಿಸಲು ನೀವ್ಯಾರು? ಈ ಭೂಮಿ ನಿಜಾಮರಿಗೆ ಸೇರಿದ್ದು ಎಂದು ತನ್ನ ಭಾಷಣದಲ್ಲಿ ಕಿಡಿ ಕಾರಿದ್ದಾರೆ. ಇದೀಗ ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಮಹಿಳೆಯ ಈ ಹೇಳಿಕೆಗೆ ನೆಟ್ಟಿಗರು ಫುಲ್ ಗರಂ ಆಗಿದ್ದಾರೆ.
ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರ ಚುನಾವಣಾ ರ‍್ಯಾಲಿಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಮಹಿಳೆಯೊಬ್ಬರು ಇದು ಸಂಭಾಜಿ ನಗರ ಅಲ್ಲ, ಇದು ಔರಂಗಬಾದ್ ನಗರ, ಈ ಭೂಮಿ ನಿಜಾಮರಿಗೆ ಮಾತ್ರ ಸೇರಿದ್ದು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಇನ್ನು ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 2.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಭೂಮಿ ಹಿಂದೂಸ್ಥಾನಕ್ಕೆ ಸೇರಿದ್ದು ಎಂಬ ಇತಿಹಾಸವನ್ನು ಮೊದಲು ಈಕೆ ತಿಳಿಯಲಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಮ್ಮಲ್ಲಿ ಔರಂಗಬಾದ್ ಎಂದು ಕರೆಯಲ್ಪಡುವ ಯಾವುದೇ ನಗರಲಿಲ್ಲʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.
ಇನ್ನೊಬ್ಬ ಬಳಕೆದಾರರು ಸರಿಯಾಗಿ ಮುಖ ತೋರಿಸಲು ಸಾಧ್ಯವಾಗದ ಜನರ ಹೇಳಿಕೆಗೆ ಇಲ್ಲಿ ಬೆಲೆ ಇಲ್ಲ ಎಂದು ನುಡಿದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.