ಸಾ ವಿಗೆ ಒಂದು ಗಂಟೆ ಮುನ್ನ ಅಪರ್ಣಾ ಅವರು ಸ್ನೇಹಿತರ ಜೊತೆ ತರ್ಲೆ ನೋ ಡಿ
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇಹಲೋಕ ತ್ಯಜಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರು ಕಿಮೋ ಥೆರಪಿಗಾಗಿ ಕೂದಲು ಕತ್ತರಿಸಿಕೊಂಡಿದ್ದರು. ಆಗಲೂ ಅವರು ನಗು ನಗುತ್ತಲೇ ಇದ್ದರು. ಗಾಯಕಿಯರಾದ ಸುನೀತಾ ಹಾಗೂ ಬಿಆರ್ ಛಾಯಾ ಅಪರ್ಣಾಗೆ ಆಪ್ತರಾಗಿದ್ದರು.
ಅವರ ಜತೆ ಕುಳಿತು ನಗು ನಗುತ್ತಾ ಮಾತನಾಡಿರುವ ವಿಡಿಯೊ ಇದೀಗ ವೈರಲ್ ಆಗಿದೆ.ಹೇಗಿದೆ ನನ್ನ ಹೊಸ ಹೇರ್ಸ್ಟೈಲ್’ ಎಂದು ಅಪರ್ಣಾ ಕೇಳಿದ್ದರು. ಆ ಬಳಿಕ ಸುನೀತಾ ಹಾಗೂ ಛಾಯಾ ಅವರು ಅಪರ್ಣಾಗೆ ಹಾಡುಗಳನ್ನು ಹಾಡಿದ್ದರು. ಈಗಾಗಲೇ ನಿಧನದ ಬಗ್ಗೆ ಪತಿ ನಾಗರಾಜ್ ವಸ್ತಾರೆ ಈ ಹಿಂದೆ ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿದ್ದರು.
ಅವಳು ನನಗೆ ಸಲ್ಲುವುದಕ್ಕೆ ಮೊದಲೇನೆ ಇಡೀ ಕರ್ನಾಟಕಕ್ಕೆ ಸೇರಿದವಳು. ಅವಳ ಒಂದೇ ಒಂದು ಆಸೆ ಇತ್ತು. ಮಾಧ್ಯಮದವರ ಮುಂದೆ ನಿಂತು. ಏನಾಯ್ತು ಅಂತ ಹೇಳು ಅಂತ. ಅಷ್ಟನ್ನು ನಾನು ಎರಡು ಗಂಟೆಗಳ ಹಿಂದೆ ಫೇಸ್ ಬುಕ್ ಪೋಸ್ಟ್‌ನಲ್ಲಿ ಹೇಳಿದ್ದೇನೆ. ಎರಡು ವರ್ಷದ ಹಿಂದೆ ಇದೇ ಜುಲೈನಲ್ಲಿ ಶ್ವಾಸಕೋಶದ ಕ್ಯಾನ್ಸರ್ ಅಂತ ತಪಾಸಣೆಯಲ್ಲಿ ಗೊತ್ತಾಯ್ತು.
ಅದಾಗಲೇ ನಾಲ್ಕನೇಯ ಹಂತದಲ್ಲಿ ಇತ್ತು. ಅದನ್ನು ನೋಡಿದ ವೈದ್ಯರು ಇನ್ನು ಆರು ತಿಂಗಳು ಇದ್ದರೆ ಹೆಚ್ಚು ಅಂತ ಹೇಳಿದ್ರು. ಆದರೆ, ಅವಳು ಛಲಗಾತಿ. ಏನಾದರೂ ಮಾಡಿ ಗೆಲ್ತೀನಿ ಅನ್ನುವಂತಹ ಛಲವಿತ್ತು. ಅದಾದ ಮೇಲೂ ಒಂದೂವರೆ ವರ್ಷ ಅಂತ ಇಟ್ಟುಕೊಳ್ಳೋಣ ಜನವರಿಯವರೆಗೂ ಹೋರಾಡಿದಳು ಎಂದು ಭಾವುಕರಾಗಿದ್ದಾರೆ.
ಕ್ಯಾನ್ಸರ್ ನಡುವೆಯೂ ಅವರು ಹಲವು ಮಜಾ ವಿದ್ ಸೃಜಾ ಸೇರಿದಂತೆ ಹಲವು ಟಿವಿ ಶೋಗಳಲ್ಲಿ ಹಾಗೂ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಮುಂತಾದ ಸೀರಿಯಲ್‌ಗಳಲ್ಲಿ ಕಾಣಿಸಿಕೊಂಡಿದ್ದರು. ಲವಲವಿಕೆಯಿಂದ ನಟಿಸಿ ಎಲ್ಲರನ್ನೂ ನಗಿಸಿದ್ದರು. ನಾವು ಅಪರ್ಣಾ ಕಾಲ್‌ಶೀಟ್‌ಗಾಗಿ ಕಾಯುತ್ತಿದ್ದೆವು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.