ಉಡುಪಿ ಬಾರ್ ಮಾಲೀಕನ ಬೆಂ ಕಿ ಅವಘಡಕ್ಕೆ ಬಿಗ್ ಟ್ವಿಸ್ಟ್; ಸಿ ಡಿದೆದ್ದ ಕರಾವಳಿ

 

ಮನುಷ್ಯನಿಗೆ ಸಾವು ಯಾವ ರೀತಿಯಲ್ಲಾದರೂ ಬರಬಹುದು. ಉಡುಪಿ ನಗರದ ಬಾರ್‌ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಉಡುಪಿ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.  <a href=https://youtube.com/embed/tNds2C-GXFo?autoplay=1&mute=1><img src=https://img.youtube.com/vi/tNds2C-GXFo/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640"> .

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ರಮಾನಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ರಮಾನಂದ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಕೂಡ ಗಂಡನ ಹಾದಿ ತುಳಿದಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಮನೆಯೊಳಗೆ ಬೆಂಕಿಯಲ್ಲಿ ಸಿಲುಕಿಕೊಂಡಿದ್ದವರ ರಕ್ಷಣೆ ಮಾಡಲಾಗಿದೆ. ಮನೆಗೆ ಬೆಂಕಿ ತಗುಲಿದ ಕಾರಣ ಈವರೆಗೂ ತಿಳಿದು ಬಂದಿಲ್ಲ. ಇನ್ನು ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 90 ಸಾವಿರ ಫಾಲೋವರ್ಸ್‌ಗಳನ್ನು ಹೊಂದಿದ್ದ ಅಶ್ವಿನಿ ಶೆಟ್ಟಿ ಅವರು ತಮ್ಮ ವಿಭಿನ್ನ ಕಂಟೆಂಟ್‌ಗಳಿಂದ ಜನಪ್ರಿಯತೆ ಗಳಿಸಿದ್ದರು. 

ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ಕಂಟೆಂಟ್ ರಚಿಸುತ್ತಿದ್ದ ಅವರು, @caboose_ballals ಎಂಬ ಇನ್ಸ್ಟಾಗ್ರಾಮ್‌ನಲ್ಲಿ ಖಾತೆಯಲ್ಲಿ ಸಕ್ರಿಯರಾಗಿದ್ದರು.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.