ಸದ್ಯದಲ್ಲಿಯೇ ಬಿಗ್ ಬಾಸ್ ಆರಂಭ; ಸ್ಪರ್ಧಿಗಳ ಆಯ್ಕೆ ಮುಕ್ತಾಯ
Aug 19, 2024, 07:48 IST
ಬಿಗ್ ಬಾಸ್ ಕನ್ನಡ ಸೀಸನ್ -11ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ ಕೊನೆಯ ಅಥವಾ ಮೊದಲ ವಾರದಲ್ಲಿ ಹೊಸ ಸೀಸನ್ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಈ ನಡುವೆ ದೊಡ್ಮನೆಗೆ ಎಂಟ್ರಿ ಆಗುವ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯೂ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಆಯಾ ಭಾಷೆಯಲ್ಲಿ ಬಿಗ್ ಬಾಸ್ ಕಾರ್ಯಕ್ರಮದ ಹೆಚ್ಚಿನ ವೀಕ್ಷಕರಿದ್ದಾರೆ. ಬಿಗ್ ಬಾಸ್ ಮನೆಗೆ 100 ದಿನಗಳ ಕಾಲ ಕಿರುತೆರೆ, ಬೆಳ್ಳಿತೆರೆ, ಮಾಧ್ಯಮ, ರಾಜಕೀಯ, ಸಾಮಾಜಿಕ, ಸೋಶಿಯಲ್ ಮೀಡಿಯಾ ಹೀಗೆ ನಾನಾ ಕ್ಷೇತ್ರದಲ್ಲಿ ಸಾಧನೆಗೈದ, ವಿವಾದದ ಮೂಲಕ ಸುದ್ದಿಯಾದ ಒಂದಷ್ಟು ಜನರು ಸ್ಪರ್ಧಿಗಳಾಗಿ ಪ್ರವೇಶವನ್ನು ಪಡೆಯುತ್ತಾರೆ.
<a href=https://youtube.com/embed/kL7j-NrfLug?autoplay=1&mute=1><img src=https://img.youtube.com/vi/kL7j-NrfLug/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಹಿಂದಿ ಬಿಗ್ ಬಾಸ್ ಬಳಿಕ ಕನ್ನಡ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೆಚ್ಚಿನ ವೀಕ್ಷಕರಿದ್ದಾರೆ. ಅದಕ್ಕೆ ಒಂದು ಮುಖ್ಯ ಕಾರಣವೆಂದರೆ ಅದು ಕಾರ್ಯಕ್ರಮವನ್ನು ನಡೆಸಿಕೊಡುವ ಕಿಚ್ಚ ಸುದೀಪ್ ಎಂದರೆ ತಪ್ಪಾಗದು. ಸೀಸನ್ ಗಳು ಮುಂದುವರೆಯುತ್ತಿದ್ದಂತೆ ಕಿಚ್ಚ ಅವರ ನಿರೂಪಣಾ ಶೈಲಿಯೂ ಅಷ್ಟೇ ಅಂದವಾಗಿ ಮೂಡಿಬರುತ್ತಿದೆ.
ಬಿಗ್ ಬಾಸ್ ಸೀಸನ್ 11 ಆರಂಭವಾಗಲಿದೆ ಎನ್ನುವ ದೂರದ ಮಾತು ಕೇಳಿ ಬರುತ್ತಿರುವ ಬೆನ್ನಲ್ಲೇ ಸ್ಪರ್ಧಿಗಳು ಯಾರು ಎನ್ನುವುದರ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ʼಮಜಾಭಾರತʼ ಖ್ಯಾತಿಯ ರಾಘವೇಂದ್ರ, ಯೂಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್ ,‘ಬೃಂದಾವನ’ ಧಾರಾವಾಹಿ ನಟ ವರುಣ್ ಆರಾಧ್ಯ, ತುಕಾಲಿ ಸಂತು ಪತ್ನಿ ಮಾನಸಾ, ಸುನೀಲ್ ರಾವ್, ಭವ್ಯಾ ಗೌಡ, ಅನಿರುದ್ಧ ,ಮೋಕ್ಷಿತಾ ಪೈ, ರೀಲ್ಸ್ ರೇಷ್ಮಾ ಸೇರಿದಂತೆ ಇತರರ ಹೆಸರು ಕೂಡ ಈ ಬಾರಿಯ ಬಿಗ್ ಬಾಸ್ ಸ್ಪರ್ಧಿಗಳ ಲಿಸ್ಟ್ ನಲ್ಲಿ ಕೇಳಿ ಬರುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.