ಮನೆಯಲ್ಲಿ ಸ್ವಂತ ಕಾರು ಇದ್ದವರಿಗೆ BPL ಕಾರ್ಡ್ ರದ್ದು, ಸರ್ಕಾರದ ಹೊಸ ಆದೇಶಕ್ಕೆ ಪ್ರಜೆಗಳು ತತ್ತರ
ತಿರುಗಾಡಲು ಕಾರಿದ್ರೆ ಇನ್ಮುಂದೆ ಸಿಗಲ್ಲ ನಿಮ್ಗೆ ಉಚಿತ ಅಕ್ಕಿ ಹೌದು ವೈಟ್ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ. ದುಡಿಮೆಗಾಗಿ ಕಾರನ್ನು ತೆಗೆದುಕೊಂಡವರ ಬಿಪಿಎಲ್ ಕಾರ್ಡ್ ಅನ್ನು ರದ್ದುಗೊಳಿಸುವುದಿಲ್ಲ ಎಂದು ಸಚಿವರು ಇದೇ ವೇಳೆ ಸ್ಪಷ್ಟನೆಯನ್ನು ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್‌ನಿಂದ ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲಾಗುತ್ತಿತ್ತು. ಆದರೆ, ಹೆಚ್ಚು ದಿನ ಹಣ ನೀಡಲು ಆಗುವುದಿಲ್ಲ. ಆದ್ದರಿಂದ ಸೆಪ್ಟೆಂಬರ್‌ನಿಂದಲೇ 10 ಕೆಜಿ ಅಕ್ಕಿ ನೀಡಲು ಚಿಂತನೆ ನಡೆಯುತ್ತಿದೆ. ಅಕ್ಕಿ ಸಿಗದಿದ್ದರೆ ದುಡ್ಡು ಹಾಕುತ್ತೇವೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆ ಜುಲೈ ತಿಂಗಳಲ್ಲಿ ಶುರುವಾಗಿದ್ದು, ಹೀಗಾಗಲೇ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿಗೆ 35 ಕೆಜಿ, ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ 5 ಕೆಜಿ ಜೊತೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದು ಯೋಜನೆಯ ಉದ್ದೇಶವಾಗಿತ್ತು.
ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿತ್ತು ಎಂದರು.
ವಿಶೇಷ ಎಂದರೆ ಕಾರು ಇರುವ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರವಾಗಿ ಮಾತನಾಡಿದ ಸಚಿವರು, ಯಲ್ಲೊ ಬೋರ್ಡ್ ಇರೋರಿಗೆ ಕಾರ್ಡ್ ರದ್ದು ಆಗಿದ್ದರೆ ಅದನ್ನು ಪರಿಶೀಲಿಸಿ ವಾಪಸ್ ಪಡೆಯೋ ಬಗ್ಗೆ ನಿರ್ಧಾರ ಮಾಡ್ತೀವಿ. ಯಲ್ಲೋ ಬೋರ್ಡ್ ಅವರು ಜೀವನಕ್ಕಾಗಿ ದುಡಿಯಲು ಕಾರು ತೆಗೆದು ಕೊಂಡಿರುತ್ತಾರೆ. ಹೀಗಾಗಿ ಅವರ ಕಾರ್ಡ್ ರದ್ದು ಮಾಡೋದಿಲ್ಲ. ವೈಟ್ ಬೋರ್ಡ್ ಕಾರು ಇರೋರ ಕಾರ್ಡ್ ರದ್ದು ವಾಪಸ್ ಪಡೆಯೋದಿಲ್ಲ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.