ಮಂಗಳೂರಿಗೆ ಹೊಸ ಬೆಳಕು ನೀಡಿದ ಬ್ರಿಜೇಶ್ ‍ಚೌಟ; ನಳೀನ್ ಕುಮಾರ್ ಸೈಡ್ ಲೈನ್ ಮಾಡಿದ ಭಾರತೀಯ ಯೋಧ

 

ಮುಂಬರುವ ಲೋಕಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಈತನ್ಮಧ್ಯೆ ಭಾರೀ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆಯೇ ಹಾಲಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಬಿಜೆಪಿ ಕೈಕೊಟ್ಟಿದೆ.

ಪರಿಣಾಮ ಹೊಸ ಮುಖ ಬ್ರಿಜೇಶ್‌ ಚೌಟಗೆ ಈ ಬಾರಿಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಒಲಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಪರಿಚಿತ ಮುಖವಾದರೂ ಅನೇಕ ಮಂದಿಗೆ ಬ್ರಿಜೇಶ್ ಚೌಟ ಯಾರು ಅನ್ನೋದು ಗೊತ್ತಿಲ್ಲ. ಹೀಗಾಗಿ ಅವರ ವ್ಯಕ್ತಿ ಪರಿಚಯ ಇಲ್ಲಿ ಮಾಡಿ ಕೊಡಲಾಗಿದೆ.ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ತೊಡಗಿಕೊಂಡಿದ್ದವರು.

ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿವೃತ್ತ ಭೂ ಸೇನಾಧಿಕಾರಿಯೂ ಹೌದು. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದಿದ್ದ ಅವರು  ಕಾಲೇಜು ದಿನಗಳಲ್ಲಿ ಮಂಗಳೂರು ವಿವಿಯಿಂದ ‘ಅತ್ಯುತ್ತಮ ಕೆಡೆಟ್’ ಕೂಡ ಪಡೆದಿದ್ದರು.ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್‌ಸಿ ಪದವಿ ಪೂರೈಸಿದ್ದ ಬ್ರಿಜೇಶ್ ಚೌಟ, ಆ ಬಳಿಕ ಮಧ್ಯಪ್ರದೇಶದ ಇಂದೋರ್‌ನ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್‌ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡಿದ್ದರು. ಆ ಬಳಿಕ ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆಗೆ ಸೇರಿದ್ದರು. <a href=https://youtube.com/embed/oouwGevavDg?autoplay=1&mute=1><img src=https://img.youtube.com/vi/oouwGevavDg/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್‌ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೂ ಕೂಡ ಏರಿದ್ದರು. ಕೆಲ ವರ್ಷಗಳ ಸೇವೆಯ ಬಳಿಕ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನಾಗಿರುವ ಬಂಟ ಸಮುದಾಯಕ್ಕೆ ಸೇರಿದ ಬ್ರಿಜೇಶ್ ಚೌಟ ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಬಳಿಕ ಬಿಜೆಪಿಯಲ್ಲಿ ತೊಡಗಿಸಿಕೊಂಡಿದ್ದಾರೆ.

2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದು, 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು. ಸದ್ಯ ಮಂಗಳೂರು ನಗರದಲ್ಲಿ ಪ್ರತೀ ವರ್ಷ ಕಂಬಳ ನಡೆಸುವ ಮೂಲಕ ಜನರಿಗೆ ಪರಿಚಯವಾಗಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.