ಹಿಂದೂ ಪರ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಬಿತ್ತು ಕೇಸ್

 

ಶುಕ್ರವಾರ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಸಂಘ ಪರಿವಾರದ ಮುಖಂಡ ಅರುಣ್​ಕುಮಾರ್ ಪುತ್ತಿಲ, ನಿಷೇಧಾಜ್ಞೆ ನಡುವೆ ಪ್ರಚೋದನಕಾರಿ‌ ಹೇಳಿಕೆ ನೀಡಿದ ಆರೋಪದಡಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ. ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ್ದ ಪುತ್ತಿಲ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಗಿಗುಡ್ಡದಲ್ಲಿ ಮುಸ್ಲಿಂ ಸಮುದಾಯದಿಂದ ಘಟನೆ ನಡೆದಿದೆ. 

ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂಡ್ರೈವರ್, ಸ್ಪಾನರ್ ಕೈ ಬಿಡಿ ತಲ್ವಾರ್ ಗಳಿಗೆ ಪೂಜೆ ಮಾಡಿ ಎಂದು ಪ್ರಚೋದನಕಾರಿ‌ ಹೇಳಿಕೆ ನೀಡಿದ್ದರು.  <a href=https://youtube.com/embed/E9d7QUeNKqM?autoplay=1&mute=1><img src=https://img.youtube.com/vi/E9d7QUeNKqM/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಪುತ್ತಿಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮತ ಸೆಳೆಯಲು ಮೂಲಭೂತ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ. ಶಿವಮೊಗ್ಗ ಹಿಂಸಾಚಾರವು ಪೂರ್ವ ಯೋಜಿತ ಕೃತ್ಯವಾಗಿದೆ. ಈ ಪ್ರದೇಶದಲ್ಲಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಹಿಂದೂ ಸಮುದಾಯಕ್ಕೆ ಬೆದರಿಕೆ ಹಾಕುವ ಉದ್ದೇಶದಿಂದ ಮೂಲಭೂತ ಶಕ್ತಿಗಳು ಈ ಕೃತ್ಯವನ್ನು ಆಶ್ರಯಿಸಿವೆ ಎಂದು ಆರೋಪಿಸಿದರು.

ಪುತ್ತಿಲ ಅವರು ಬಿಜೆಪಿ ನಾಯಕರಾಗಿದ್ದರು ಮತ್ತು ಟಿಕೆಟ್ ನಿರಾಕರಿಸಿದ ನಂತರ ಅವರು ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಅತಿ ಹೆಚ್ಚು ಮತಗಳನ್ನು ಪಡೆದಿದ್ದರು. ಹಾಗಾಗಿ ಅವರ ಮೇಲೆ ಬಿಜೆಪಿಯ ಒಂದು ಕಣ್ಣು ಇದೆ. ಆ ಕಾರಣದಿಂದ ಕಟೀಲು ಅವರಿಗೆ ಹೊಸಚಿಂತೆ ಶುರುವಾಗಿದೆ ಎನ್ನಲಾಗುತ್ತಿದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.