ವಿನೋದ್ ರಾಜ್ ಗೆ ಕಾಲ್ ಮಾಡಿ ಸಹಾಯ ಕೇಳಿದ ದ ರ್ಶನ್ ಪತ್ನಿ;
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ.
ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ.
https://www.youtube.com/live/VJ4cWHnIPEQ?si=VPY959trzKu0sTrp
ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್ ಎದುರು ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ.
ಇನ್ನು ವಿಜಯಲಕ್ಷ್ಮೀ ಅವರು ವಿನೋದ್ ರಾಜ್ ಕುಟುಂಬದ ಆಪ್ತರು ಹಾಗಾಗಿ ಅವರಿಗೆ ಫೋನ್ ಮಾಡಿ ದುಃಖವನ್ನು ಹಂಚಿಕೊಂಡಿದ್ದಾರೆ. ಅದರಬೆನ್ನಲ್ಲೇ ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಅವರ ತಂದೆ, ತಾಯಿ ಹಾಗೂ ಅವರ ಪತ್ನಿಯನ್ನು ಭೇಟಿ ಮಾಡಿದ ವಿನೋದ್ ರಾಜ್ ಅವರೊಂದಿಗೆ ಮಾತನಾಡಿ ಒಂದು ಲಕ್ಷ ರೂಪಾಯಿ ಹಣ ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.