ದೋನಿಗೆ ವಾರ್ನಿಂಗ್ ಕೊಟ್ಟ ಫ್ಯಾನ್ಸ್; 'ಇನ್ನುಮುಂದೆ ಮೈದಾನಕ್ಕೆ ಬರ್ಬೇಡ'
ಈ ಸಲ ಕಪ್ ನಮ್ಮದೇ ಎನ್ನೋದಕ್ಕೆ ಮತ್ತೊಂದು ಕಾರಣವಿದೆ. ಹೌದು ಚೆನ್ನೈ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 27 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 4ನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. 219 ರನ್ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಕಳೆದುಕೊಂಡು 191 ರನ್ ಗಳಿಸಲಷ್ಟೇ ಶಕ್ತವಾಗಿದೆ.
ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಅನುಭವಿಸಿದ್ದ ಸೋಲಿಗೆ ಇದೀಗ ಆರ್‌ಸಿಬಿ ತಂಡವು ತವರಿನಲ್ಲೇ ಸೇಡು ತೀರಿಸಿಕೊಳ್ಳುವುದರ ಜತೆಗೆ ಚೆನ್ನೈ ತಂಡವನ್ನು ಟೂರ್ನಿಯಿಂದಲೇ ಹೊರದಬ್ಬಿದೆ. ಮೊದಲ 8 ಪಂದ್ಯಗಳಲ್ಲಿ 7 ಸೋಲು ಕಂಡಿದ್ದ ಆರ್‌ಸಿಬಿ ಆ ಬಳಿಕ ಸತತ 6 ಪಂದ್ಯಗಳನ್ನು ಜಯಿಸಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ.ಒಂದೆಡೆ ಪ್ಲೇಆಫ್ಗೆ ಪ್ರವೇಶಿಸಿದ ಖುಷಿ, ಮತ್ತೊಂದು ಸಾಂಪ್ರದಾಯಿಕ ಎದುರಾಳಿಗಳನ್ನು ಬಗ್ಗು ಬಡಿದ ಸಂತಸ…ಆರ್‌ಸಿಬಿ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇರಲಿಲ್ಲ.
ಆರ್‌ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಕುಣಿದು ಕುಪ್ಪಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಸಂಭ್ರಮಿಸಿದರು. ಕೆಲವೆಡೆ ಪಟಾಕಿಗಳ ಸಂಭ್ರಮ ಮನೆ ಮಾಡಿದರೆ, ಮತ್ತೆ ಕೆಲವೆಡೆ ಕೇಕ್ ಕಟ್ಟಿಂಗ್ ಮೂಲಕ ಆರ್‌ಸಿಬಿ ಅಭಿಮಾನಿಗಳು ಸಂತಸ ಹಂಚಿಕೊಂಡರು. ಚೆನ್ನೈ ಸೂಪರ್ ಕಿಂಗ್ಸ್ ಬಸ್ ಗೆ ಗುದ್ದಿ ನಡೀರಿ ಮನೆಗೆ ಎಂದು ಹೇಳಿ ತಮ್ಮ ಖುಷಿಯನ್ನು ಹೊರಹಾಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.