ಮಂಗಳೂರು ಮೀನಿಗೆ ಬಲೆ ಹಾಕಿದ ಡಿಕೆಶಿ, ಬಗೆಬಗೆಯ ಮೀನುಗಳು ಡಿಕೆ ಬ.ಲೆಗೆ
ಸುವಿಶಾಲ ಅರಬ್ಬೀ ಸಮುದ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಗಾಳ ಹಾಕಿ ಮೀನು ಹಿಡಿದರು. ಮಂಗಳೂರಿನ ಉಳ್ಳಾಲ ಬೀಚ್ ನಲ್ಲಿ ಫಿಶಿಂಗ್ ನಲ್ಲಿ ತೊಡಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪೀಕರ್ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಸಾಥ್ ನೀಡಿದರು. ತಮ್ಮ ತಂಡದೊಂದಿಗೆ ಡಿಕೆಶಿ ಇಂದು ಬೆಳಗ್ಗೆ ಉಳ್ಳಾಲ ಬೀಚ್ ಗೆ ಭೇಟಿ ನೀಡಿದ್ದರು.
ಇಂದು ಬೆಳಗ್ಗೆ ಡಿಕೆಶಿ ತಮ್ಮ ತಂಡದೊಂದಿಗೆ ಉಳ್ಳಾಲ ಬೀಚ್ ಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಉಳ್ಳಾಲ ಬೀಚ್ ನಲ್ಲಿ ಫಿಶಿಂಗ್ ನಲ್ಲಿ ತೊಡಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪೀಕರ್ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಜೊತೆಗೆ ಆಗಮಿಸಿದ್ದರು.ನಮ್ಮದು ಎಲ್ಲಾ ಜಾತಿ, ಧರ್ಮ, ವರ್ಗಗಳ ರಕ್ಷಣೆಗಾಗಿ ಇರುವ ಸರ್ಕಾರ. ಸಮಾಜದಲ್ಲಿ ಸೋದರತ್ವ ಭಾವನೆ ಮುಂದುವರೆಯಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.
ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಮೈದಾನದಲ್ಲಿ ನಡೆದ ಸುನ್ನಿ ಯುವಜನ ಸಂಘಟನೆಯ 30ನೇ ವರ್ಷದ ಮಹಾಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು ಮಾತನಾಡಿದರು. ಚುನಾವಣೆ ಹತ್ತಿರ ಬರುತ್ತಿದೆ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ದೇಶವನ್ನು ರಕ್ಷಿಸಬೇಕಾಗಿದೆ. ಎಲ್ಲರೂ ಸರ್ಕಾರಕ್ಕೆ ಆಶೀರ್ವಾದ ಮಾಡಬೇಕು. ನಾವು ನಿಮ್ಮೊಂದಿಗೆ ಇದ್ದೇವೆ. ಅನುದಾನದ ಕುರಿತು ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ ಎಂದರು.
ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಕೆದಕುವ ಮೂಲಕ ರಾಜಕೀಯದಲ್ಲಿ ತೊಡಗಿದ್ದಾರೆ. ಆದರೆ, ಜನರ ಹೊಟ್ಟೆ ತುಂಬಿಸುವತ್ತ ನಾನು ಕೆಲಸ ಮಾಡುತ್ತಿದ್ದೇವೆ. ನಾವು ಮಾನವೀಯತೆಯನ್ನು ಎತ್ತಿ ಹಿಡಿದಿದ್ದೇವೆ. ದೇಶವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನೀವು ನಮಗೆ ಅಧಿಕಾರ ಕೊಟ್ಟಿದ್ದೀರಿ. ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.