ಗಿಳಿಯಾರ್ ಮುಖಕ್ಕೆ ಈ ಮಹಾ ತಾಯಿ ಹೇಳಿದ್ದೇನು ಗೊತ್ತಾ, ತಂದೆ ತಾಯಿಗೆ ಅನ್ನ ಹಾಕಲು ಯೋಗ್ಯತೆ ಇಲ್ಲ ಇವನಿಗೆ
ಧರ್ಮಸ್ಥಳದಲ್ಲಿ ಹನ್ನೊಂದು ವರ್ಷದ ಹಿಂದೆ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಕೃತ್ಯಕ್ಕೆ ಸಂಬಂಧಿಸಿ ನ್ಯಾಯ ದೊರಕಿಸಿಕೊಡಬೇಕೆಂದು ರಾಜ್ಯದ ಹಲೆವೆಡೆ ನಡೆಯುತ್ತಿರುವ ಪ್ರತಿಭಟನೆಯ ವಿವಿಧ ರೂಪ ಪಡೆದಿದೆ.
ಹೌದು ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ನಗರದ ಕದ್ರಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಜನಸಾಗರವೇ ನೆರೆದಿತ್ತು.
ಸೌಜನ್ಯಾ ತಾಯಿ ಕುಸುಮಾವತಿ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಸೇರಿದಂತೆ ಸಾವಿರಾರು ಜನರು ಸೇರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. ಅಲ್ಲದೆ, ಪ್ರಕರಣವನ್ನು ಮರುತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದರು.
ದೇಶದಲ್ಲಿ ಮಾನವೀಯತೆ, ಕಾನೂನು ಸತ್ತು ಹೋಗಿದೆ. ಸೌಜನ್ಯಾಳನ್ನು ಅತ್ಯಾಚಾರಗೈದು ಹತ್ಯೆ ಮಾಡಿದವರು ಜೈಲಿಗೆ ಹೋಗಿಲ್ಲ. ಕಾನೂನು ರೀತಿಯಲ್ಲಿ ನ್ಯಾಯ ಸಿಗದಿದ್ದರೆ ಅದನ್ನು ಕಸಿದುಕೊಳ್ಳಲು ಪ್ರಜಾಪ್ರಭುತ್ವಕ್ಕೆ ಗೊತ್ತಿದೆ. ಅದಕ್ಕೆ ಅವಕಾಶ ನೀಡಬಾರದು. ಆದಷ್ಟು ಶೀಘ್ರ ಪ್ರಕರಣದ ಮರುತನಿಖೆಯಾಗಬೇಕು. ಗೃಹಸಚಿವ ಪರಮೇಶ್ವರ್ ಅವರು ಸೌಜನ್ಯಾ ಪ್ರಕರಣ ಮುಗಿದ ಅಧ್ಯಾಯ ಎಂದಿದ್ದಾರೆ.
ಅವರ ಮನೆ ಬಾಗಿಲಿಗೆ ಮುತ್ತಿಗೆ ಹಾಕುವಾಗ ಅವರಿಗೆ ನಮ್ಮ ಹೋರಾಟ ಏನೆಂಬುದು ಗೊತ್ತಾಗಲಿದೆ. ಸಮಿತಿಯ ಸಂಚಾಲಕಿ ಪ್ರಸನ್ನ ರವಿ ಅವರು ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಒಂದಾಗಿ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗೃಹಸಚಿವರು, ರಾಷ್ಟ್ರಪತಿಯವರಿಗೆ ಒತ್ತಡ ಹಾಕಬೇಕು. ನ್ಯಾಯ ಸಿಗದಿದ್ದರೆ ಚುನಾವಣೆ ಬಹಿಷ್ಕಾರ ಮಾಡಬೇಕು ಅತ್ಯಾಚಾರಿಗಳಿಗೆ ಹಾವು ಕಚ್ಚಲಿ ಎಂದು ಬೇಡಿಕೊಳ್ಳಬೇಕು ಎಂದು ನುಡಿದಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.