ಬಿಡುಗಡೆಯಾದ ತಕ್ಷಣ ಮುರುಘಶ್ರೀ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ, ಭಕ್ತರು ಶಾ.ಕ್

 

ನಮ್ಮ ಸಮಾಜದಲ್ಲಿ ಕೆಲ ಕಳ್ಳ ಸನ್ಯಾಸಿಗಳಿಗೆ ಸಿಕ್ಕ ಮರ್ಯಾದಿ ಚಂದದಿ ಸಂಸಾರ ಮಾಡಿದವರಿಗೆ ಸಿಗುವುದಿಲ್ಲ. ಹೌದು ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಬಿಡುಗಡೆ ಹೊಂದಿದ ನಂತರ ದಾವಣಗೆರೆಯ ವಿರಕ್ತ ಮಠಕ್ಕೆ ಆಗಮಿಸಿದ್ದಾರೆ. 

ದೊಡ್ಡಪೇಟೆಯಲ್ಲಿರುವ ವಿರಕ್ತ ಮಠಕ್ಕೆ ತೆರಳುವ ಮುನ್ನ ಶ್ರೀ ಶಿವಯೋಗಿ ಮಂದಿರ ಆವರಣದಲ್ಲಿರುವ ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಮತ್ತು ಅಥಣಿ ಮುರುಘರಾಜೇಂದ್ರ ಶಿವಯೋಗಿಗಳ ಗದ್ದುಗೆಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಮುರುಘಾ ಶರಣರ ಬರುವಿಕೆಗೆ ಕಾಯುತ್ತಿದ್ದ ಭಕ್ತರು, ಟ್ರಸ್ಟ್ ಪದಾಧಿಕಾರಿಗಳು ಶರಣರು ಆಗಮಿಸುತ್ತಿ ದ್ದಂತೆ ಹೂಮಾಲೆ ಹಾಕಿ ಸ್ವಾಗತಿಸಿದರು.  <a href=https://youtube.com/embed/9pH_r5tm7lA?autoplay=1&mute=1><img src=https://img.youtube.com/vi/9pH_r5tm7lA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಮುರುಘೇಶನಿಗೆ, ಶಿವಮೂರ್ತಿ ಮುರುಘಾ ಶರಣರಿಗೆ ಜಯವಾಗಲಿ ಎಂದು ಜೈಕಾರ ಹಾಕಿದರು. ಪಾದ ಪೂಜೆ ಮಾಡಿ ಕೈ ಮುಗಿದರು. ಮಹಿಳೆಯರು ಪೂರ್ಣ ಕುಂಭ ಸ್ವಾಗತ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಮೂರ್ತಿ ಮುರುಘಾ ಶರಣರು, ತಾವು ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ. 
ಮೌನವೇ ನಮಗೆ ಒಳಿತು ಎನಿಸುತ್ತದೆ. ನಮ್ಮ ವಕೀಲರು ಎಲ್ಲವನ್ನು ಮಾಧ್ಯಮದವರಿಗೆ ಹೇಳಿದ್ದಾರೆ. 

ನಿಮ್ಮ ಸಹಕಾರ ಇರಲಿ. ಮುಂದೆ ಒಳ್ಳೆಯ ಕೆಲಸ ಮಾಡೋಣ ಎಂದರು.ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆ ಹೊಂದಿ ದಾವಣಗೆರೆಗೆ ಆಗಮಿಸುತ್ತಿದ್ದ ಮಾರ್ಗ ಮಧ್ಯೆದಲ್ಲಿಯೇ ಶಿವಮೂರ್ತಿ ಶರಣರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾದರು. ಕೆಲ ಸಮಯ ನಡೆದ ವಿಚಾರಣೆ ನಂತರ ಶಿವಯೋಗಿ ಮಂದಿರಕ್ಕೆ ಆಗಮಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.