ABD ವಿಲಿಯರ್ಸ್ ಗೆ ಹಿಗ್ಗಾಮುಗ್ಗಾ ಜಾಡಿಸಿದ ಗೌತಮ್ ಗಂಭೀರ್

 

ಇಷ್ಟು ದಿನ ಮೌನವಾಗಿದ್ದು ಎಲ್ಲವನ್ನು ಸಹಿಸಿಕೊಂಡ ಗೌತಮ್ ಗಂಭೀರ್ ಸಿಡಿದೆದ್ದಿದ್ದಾರೆ. ಸದ್ಯ ನಡೆಯುತ್ತಿರುವ ಐಪಿಎಲ್ 2024ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕಳಪೆ ಪ್ರದರ್ಶನದಿಂದಾಗಿ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ.

ರೋಹಿತ್ ಶರ್ಮಾ ಬದಲಿಗೆ ಹಾರ್ಧಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ನೇಮಿಸುವ ಮುಂಬೈ ಇಂಡಿಯನ್ಸ್ ಆಡಳಿತದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಂಬೈ ಇಂಡಿಯನ್ಸ್ ತಂಡ ಈ ಆವೃತ್ತಿಯಲ್ಲಿ ಆಡಿರುವ 13 ಪಂದ್ಯಗಳಲ್ಲಿ ಕೇವಲ 4 ರಲ್ಲಿ ಗೆಲುವು ಸಾಧಿಸಿರುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

ಇದೀಗ ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಪ್ಲೇಯರ್ ಎಬಿ ಡಿವಿಲಿಯರ್ಸ್ ವಿರುದ್ಧ ಕೂಡ ಮಾತುಗಳು ಕೇಳಿಬರುತ್ತಿದೆ.ಭಾರತದ ಮಾಜಿ ಬ್ಯಾಟರ್ ಮತ್ತು ಸದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಅವರು ಹಾರ್ದಿಕ್ ಪಾಂಡ್ಯ ಪರ ಬ್ಯಾಟ್ ಬೀಸಿದ್ದಾರೆ. 

ಹಾರ್ದಿಕ್‌ರನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ಅವರ ದಾಖಲೆಗಳು ಐಪಿಎಲ್‌ನಲ್ಲಿ ಅಷ್ಟೇನು ಪ್ರಭಾವಶಾಲಿಯಾಗಿಲ್ಲ ಎಂದು ಹೇಳಿದ್ದಾರೆ. ಆರ್‌ಸಿಬಿ ತಂಡಕ್ಕಾಗಿ ಪ್ರಶಸ್ತಿ ಗೆಲ್ಲುವಲ್ಲಿ ಡಿವಿಲಿಯರ್ಸ್ ವಿಫಲವಾಗಿದ್ದಾರೆ ಮತ್ತು ಅವರ ಸ್ವಂತ ಸ್ಕೋರ್‌ಗಳನ್ನು ಹೊರತುಪಡಿಸಿ, ಅವರು ಐಪಿಎಲ್‌ನಲ್ಲಿ ಏನನ್ನೂ ಸಾಧಿಸಿಲ್ಲ ಎಂದು ಗಂಭೀರ್ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.