ಗೀತಾ ಶಿವರಾಜ್ ಕುಮಾರ್ ಹೀನಾಯ ಸೋಲು; ಪತ್ನಿ ಸೋ ಲಿಗೆ ಶಿವಣ್ಣ ಎದ್ದುಬಿದ್ದು ಕಣ್ಣೀ ರು

 

ಅದ್ಯಾಕೋ ಮತದಾರ ಪ್ರಭುಗಳು ಗೀತಾ ಶಿವರಾಜ್ ಕುಮಾರ್ ಮೇಲೆ ಮುನಿಸಿ ಕೊಂಡ ಹಾಗಿದೆ.ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ 2,43,715 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.ಮಂಗಳವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನ ಗೀತಾ ಶಿವರಾಜ್‌ ಕುಮಾರ್ 2ನೇ ಸ್ಥಾನ ಪಡೆದರು. 

ಪಕ್ಷೇತರ ಅಭ್ಯರ್ಥಿಯಾಗಿದ್ದ ಕೆ. ಎಸ್. ಈಶ್ವರಪ್ಪ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇನ್ನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್‌ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. 

ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಂತಿಮ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. 

ಬಿಜೆಪಿಯ ಬಿ. ವೈ. ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಂದ ಪ್ರಮಾಣ ಪತ್ರವನ್ನು ಪಡೆದಿದ್ದಾರೆ.ಬಿ. ವೈ. ರಾಘವೇಂದ್ರ 7,78,721 ಮತಗಳನ್ನು ಪಡೆದಿದ್ದು, ಗೆಲುವಿನ ಅಂತರ 2,43,715 ಮತಗಳು. ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ 5,35,006 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ 30,050 ಮತಗಳನ್ನುಗಳಿಸಿ 3ನೇ ಸ್ಥಾನವನ್ನು ಪಡೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.