ಈ 3 ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಅರ್ಜಿ ಹಾಕಬಹುದು, ಹೊಸ ನಿರ್ಧಾರ ಕೈಗೊಂಡ ಸಿಎಮ್

 

ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್‌ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್‌ 15ರ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ. ಈ ಯೋಜನೆಗೆ ಸರ್ಕಾರ ಅನೇಕ ಷರತ್ತುಗಳನ್ನು ವಿಧಿಸಿದ್ದು, ಯೋಜನೆಯ ಸಂಪೂರ್ಣ ಮಾಹಿತಿ ನಾವಿಂದು ಕೊಡ್ತೇವೆ.

ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಎಲ್‌ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯಜಮಾನಿ ಅಥವಾ ಅವಳ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅನರ್ಹರಾಗಿರುತ್ತಾರೆ ಎಂದು ಸರಕಾರ ಮಾರ್ಗಸೂಚಿ ಹೊರಡಿಸಿದೆ.

ಪಡಿತರ ಚೀಟಿಯ ಸಂಖ್ಯೆ. ಯಜಮಾನಿ ಮತ್ತು ಯಜಮಾನಿ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆಯ ಪಾಸ್‌ಬುಕ್‌/ಫ‌ಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್‌ ಖಾತೆಯ ವಿವರ ನೀಡಬೇಕಿದೆ. ಫ‌ಲಾನುಭವಿಗಳು ಗ್ರಾಮ ಒನ್‌, ಬೆಂಗಳೂರು ಒನ್‌, ಕರ್ನಾಟಕ ಒನ್‌ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಥವಾ ಪ್ರಜಾ ಪ್ರತಿನಿಧಿ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. 

ಪ್ರತೀ ಫ‌ಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್‌ಎಂಎಸ್‌ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಅನುಮೋದಿಸಲ್ಪಟ್ಟ ಅರ್ಹ ಫ‌ಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು ಎಂದಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳನ್ನು ಹೊಂದಿರಲೇಬೇಕು.1. ರೇಷನ್‌ ಕಾರ್ಡ್‌2. 

ಬ್ಯಾಂಕ್‌ ಪಾಸ್‌ಬುಕ್‌3. ಆಧಾರ್‌ ಕಾರ್ಡ್‌4. ಯಾವುದಾದರೂ ಗುರುತಿನ ಚೀಟಿಯ ನಕಲನ್ನು ನೀಡಬೇಕು. ಈ ಯೋಜನೆಯ ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಜೋಡಣೆ ಮಾಡಿರಲೇಬೇಕು ಎಂದು ಹೇಳಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.