33 ವರ್ಷಕ್ಕೆ ಸಕ್ಕತ್ ಹಾಟ್ ಆಗಿ ಮದುವೆಗೆ ಸಿದ್ದವಾಗುತ್ತಿರುವ ಹರ್ಷಿಕಾ ಪೂಣಚ್ಚ, ಅವಸರ ಪಡುತ್ತಿರುವ ಭುವನ್

 

ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಭುವನ್ ಮದುವೆ ಸಂಭ್ರಮ ಮನೆ ಮಾಡಿದೆ. ಇದೇ ಆಗಸ್ಟ್ 24ರಂದು ಕೊಡವ ಪದ್ಧತಿಯಂತೆ ಭುವನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆಗೂ ಮುನ್ನ ತಯಾರಿ ಮತ್ತು ಪೂಜಾ ವಿಧಾನಗಳು ನಟಿಯ ಮನೆಯಲ್ಲಿ ಜರಗುತ್ತಿವೆ.
ಹರ್ಷಿಕಾ-ಭುವನ್ 12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. 

ಭರ್ಜರಿಯಾಗಿ ಮದುವೆ ತಯಾರಿ ಹರ್ಷಿಕಾ ಮನೆಯಲ್ಲಿ ನಡೆಯುತ್ತಿದೆ. ಈ ಕುರಿತ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. 

ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ. ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. 

ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ. ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ಕೊಡಗಿನ ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ ನಡೆಯಲಿದೆ.  <a href=https://youtube.com/embed/aECXHmhzkmY?autoplay=1&mute=1><img src=https://img.youtube.com/vi/aECXHmhzkmY/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. 
ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.