ನಿತ್ಯಾನಂದನ ಕೈಲಾಸದ ಪ್ರಧಾನಿಯಾದ ಕನ್ನಡದ ಚಂದುಳ್ಳಿ ಚೆಲುವೆ, ನೆಟ್ಟಿಗರು ಗರಂ

 

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ ಅಲ್ಲಿಯೇ ನೆಲೆಯೂರಿದ್ದಾನೆ. ಇದೀಗ ಆ ದೇಶಕ್ಕೆ ಪ್ರಧಾನಿಯನ್ನು ನೇಮಕ ಮಾಡಿದ್ದಾನೆ.

ನಟಿ ರಂಜಿತಾ ಕಾರಣದಿಂದಾಗಿಯೇ ನಿತ್ಯಾನಂದ ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ. ಇಬ್ಬರ ನಡುವಿನ ಖಾಸಗಿ ವಿಡಿಯೋ ವಿಚಾರವಾಗಿ ಕೋರ್ಟ್ ಮೆಟ್ಟಿಲು ಕೂಡ ಏರಿದ್ದ. ನಂತರ ದೇಶವನ್ನೇ ಬಿಡಬೇಕಾಗಿ ಬಂತು. ದೇಶವನ್ನು ತೊರೆಯುವಾಗ ತನ್ನ ಅಷ್ಟೂ ಶಿಷ್ಯರನ್ನು ವಿಮಾನ ಏರಿಸಿ ಹೊರಟೇ ಬಿಟ್ಟ. ಹೊಸ ದೇಶ ಕಟ್ಟಿ ಮತ್ತೆ ಅಚ್ಚರಿ ಮೂಡಿಸಿದೆ. ಈ ದೇಶಕ್ಕೆ ರಂಜಿತಾ ಅವರನ್ನು ಪ್ರಧಾನಿ ಮಾಡಿದ್ದಾನೆ ಎನ್ನುವುದು ಸದ್ಯದ ವರ್ತಮಾನ.  <a href=https://youtube.com/embed/bg10VSW-ndI?autoplay=1&mute=1><img src=https://img.youtube.com/vi/bg10VSW-ndI/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಈ ಹಿಂದೆ ತನ್ನ ದೇಶದ ಕರೆನ್ಸಿಯನ್ನು ನಿತ್ಯಾನಂದ ಬಿಡುಗಡೆ ಮಾಡಿದ್ದ. ತನ್ನ ದೇಶದ ವೀಸಾ ಕೂಡ ಘೋಷಿಸಿದ್ದ. ಕೈಲಾಸ ದೇಶಕ್ಕೆ ಬರುವವರು ಯಾವೆಲ್ಲ ನಿಯಮ ಪಾಲಿಸಬೇಕು ಎನ್ನುವ ಕುರಿತಾದ ವೆಬ್ ಸೈಟ್ ಕೂಡ ನಿತ್ಯಾನಂದ ಮಾಡಿಕೊಂಡಿದ್ದಾನೆ. ಯಾರಿಗೆಲ್ಲ ವೀಸಾ ಕೊಡಲಾಗುತ್ತದೆ ಎನ್ನುವ ವಿವರಣೆಯನ್ನು ಅದರಲ್ಲಿ ನೀಡಿದ್ದಾನೆ. ಅದು ಪಕ್ಕಾ ಹಿಂದೂಗಳೇ ಇರುವ ದೇಶವೆಂದು ನಿತ್ಯಾನಂದ ಈ ಹಿಂದೆ ಘೋಷಿಸಿಕೊಂಡಿದ್ದ. ಜೊತೆಗೆ ಶಿಷ್ಯ ರಂಜಿತಾಳ ಹೆಸರನ್ನೇ ಬದಲಾಯಿಸಿ ನಿತ್ಯಾನಂದಮಯಿ ಎಂದೂ ಹೆಸರಿಟ್ಟಿದ್ದ. 

2019ರಲ್ಲಿ ದೇಶದಿಂದ ಪರಾರಿಯಾಗಿ ಇದೀಗ ಹೊಸ ದೇಶದಲ್ಲಿ ಖುಷಿಯಾಗಿದ್ದಾನೆ. ಪ್ರಧಾನಿಯನ್ನೂ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾನೆ. ಈ ಕುರಿತು ಖಚಿತ ಮಾಹಿತಿ ಇರದೇ ಇದ್ದರೂ, ತಮಿಳು ಪತ್ರಿಕೆಗಳು ಈ ಸುದ್ದಿಯನ್ನು ದೊಡ್ಡದಾಗಿ ಪ್ರಚಾರ ಮಾಡಿವೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.