ಹಸಿರು ಕ್ರಾಂತಿ ಪಿತಾಮಹ ಎಂ ಎಸ್ ಸ್ವಾಮಿನಾಥನ್ ಇನ್ನಿಲ್ಲ, ಯಾರದು ಗೊತ್ತಾ ಈಗಲೇ ನೋಡಿ

 
ವಿಶ್ವ ಕಂಡ ಶ್ರೇಷ್ಠ ಕೃಷಿ ವಿಜ್ಞಾನಿ, ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಪ್ರಖ್ಯಾತರಾದ ಡಾ. ಮೊಂಕೊಂಬ ಸಾಂಬಶಿವನ್ ಸ್ವಾಮಿನಾಥನ್ ಅವರು ನಿನ್ನೆ ಚೆನ್ನೈನಲ್ಲಿ ನಿಧರಾಗಿದ್ದಾರೆ. ಚೆನ್ನೈನಲ್ಲಿ ವಾಸವಿದ್ದ ಸ್ವಾಮಿನಾಥನ್ ಅವರು, ವಯೋಸಹಜವಾಗಿ ಇಂದು ಸಾವನ್ನಪ್ಪಿದ್ದಾರೆ. 
ಎಂಎಸ್ ಸ್ವಾಮಿನಾಥನ್ ಅವರ ಪತ್ನಿ ಮಿನಾ ಸ್ವಾಮಿನಾಥನ್​ ಅವರು ಕಳೆದ ವರ್ಷ ನಿಧನರಾಗಿದ್ದರು. ಸ್ವಾಮಿನಾಥನ್​ ಅವರು ಈಗ ಮೂವರು ಪುತ್ರಿಯರಾದ ಸೌಮ್ಯ ಸ್ವಾಮಿನಾಥನ್, ಮಥುರಾ ಸ್ವಾಮಿನಾಥನ್ ಮತ್ತು ನಿತ್ಯ ಸ್ವಾಮಿನಾಥನ್ ಅವರನ್ನು ಅಗಲಿದ್ದಾರೆ. ಸ್ವಾಮಿನಾಥನ್ ಅವರ ಅಗಲಿಕೆಗೆ ಪ್ರಧಾನಂತ್ರಿ ನರೇಂದ್ರ ಮೋದಿ ಸೇರಿದಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಆಗಸ್ಟ್ 7, 1925 ರಂದು ಕುಂಭಕೋಣಂ ಜಿಲ್ಲೆಯಲ್ಲಿ ಜನಿಸಿದ ಸ್ವಾಮಿನಾಥನ್ ಅವರು ತಮ್ಮ ಸ್ವಂತ ಊರಿನಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ. 
ಸ್ವಾಮಿನಾಥನ್ ಅವರ ಅದ್ಭುತ ಕೆಲಸವು ಭಾರತೀಯ ಕೃಷಿಯಲ್ಲಿ ಕ್ರಾಂತಿಯನ್ನುಂಟುಮಾಡಿತು, ದೇಶವು ವ್ಯಾಪಕವಾದ ಕ್ಷಾಮವನ್ನು ನಿವಾರಿಸಲು ಮತ್ತು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡಿತು. ಸ್ವಾಮಿನಾಥನ್ ಅವರ ಪ್ರವರ್ತಕ ಪ್ರಯತ್ನಗಳು ಗೋಧಿ ಮತ್ತು ಅಕ್ಕಿಯ ಹೆಚ್ಚಿನ ಇಳುವರಿ ತಳಿಗಳ ಅಭಿವೃದ್ಧಿ ಮತ್ತು ಪರಿಚಯವನ್ನು ಒಳಗೊಂಡಿತ್ತು, ಇದು ಭಾರತದಾದ್ಯಂತ ಆಹಾರ ಧಾನ್ಯ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿತು ಎಂದು ಹೇಳಲಾಗಿದೆ. <a href=https://youtube.com/embed/fn3T8QL9CvA?autoplay=1&mute=1><img src=https://img.youtube.com/vi/fn3T8QL9CvA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋಧಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ.ಸುಬ್ರಮಣಿಯಂ, ಜಗಜೀವನ್ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು.
ಇವರ ಸಾವಿಗೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.