ಪವಿತ್ರ ಗೌಡ ಬಿಡುಗಡೆ? ಮಾಧ್ಯಮದ ಮುಂದೆ ನಗುಮುಖ

 

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಪ್ರೇಯಸಿ ಪವಿತ್ರಾ ಗೌಡ ಅವರನ್ನೂ ಬಂಧಿಸಲಾಗಿದೆ. ಮದುವೆಯಾಗಿ ಒಬ್ಬ ಮಗಳಿರುವ ಪವಿತ್ರಾ ಗೌಡ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿದ್ದಾರೆ. ಇನ್ನು ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿ ಪವಿತ್ರಾ ಗೌಡ ಸೇರಿ ಕೆಲ ಆರೋಪಿಗಳ ಮನೆಗಳಲ್ಲಿ ಸ್ಥಳ ಮಹಜರು ನಡೆಸಿ ಕೆಲ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ.

ರಾಜರಾಜೇಶ್ವರಿನಗರದಲ್ಲಿರುವ ಆರೋಪಿ ಪವಿತ್ರಾ ಗೌಡ ಅವರ ನಿವಾಸಕ್ಕೆ ಆರೋಪಿ ಪವನ್‌ ಮತ್ತು ಪವಿತ್ರಾ ಗೌಡ ಇಬ್ಬರನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಗೌಡ ಘಟನೆ ನಡೆದ ಶೆಡ್‌ನಿಂದ ನೇರವಾಗಿ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು, ಘಟನೆ ದಿನ ಪವಿತ್ರಾ ಗೌಡ ಧರಿಸಿದ್ದ ಬಟ್ಟೆ, ಚಪ್ಪಲಿಗಳ ಬಗ್ಗೆ ಪರಿಶೀಲಿಸಿದರು.  <a href=https://youtube.com/embed/7QWDml0PVHc?autoplay=1&mute=1><img src=https://img.youtube.com/vi/7QWDml0PVHc/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಆರೋಪಿ ಪವನ್, ದರ್ಶನ್‌ ಮತ್ತು ಪವಿತ್ರಾ ಗೌಡ ಇಬ್ಬರ ಮನೆಯಲ್ಲೂ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನೂ ಸ್ಥಳ ಮಹಜರಿಗೆ ಕರೆತಂದಿದ್ದರು. ಜತೆಯಲ್ಲೇ ಕರೆತಂದಿದ್ದ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡವು ಪವಿತ್ರಾ ಗೌಡ ಮನೆಯಲ್ಲಿ ಕೆಲವು ಮಾದರಿಗಳನ್ನು ಸಂಗ್ರಹಿಸಿದೆ. ಅಂತೆಯೆ ಪೊಲೀಸರು ಪವಿತ್ರಾ ಗೌಡ ಮನೆಯ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಸಂಗ್ರಹಿಸಿದರು. ಪವಿತ್ರಾ ಓಡಾಡುವ ಐಷಾರಾಮಿ ಸೇರಿ ಮೂರು ಕಾರುಗಳನ್ನೂ ತಪಾಸಣೆ ನಡೆಸಿದರು.

ಪೊಲೀಸರು ಸ್ಥಳ ಮಹಜರಿಗೆ ಮನೆಗೆ ಕರೆತಂದ ವೇಳೆ ಪವಿತ್ರಾ ಗೌಡ ಮತ್ತು ಪವನ್‌ ನಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರೋಪಿ ಪವನ್‌ ಪೊಲೀಸರ ಭದ್ರತೆಯಲ್ಲಿ ಮನೆ ಪ್ರವೇಶಿಸುವ ನಗುತ್ತಾ ಹೋಗುತ್ತಾನೆ. ಸ್ಥಳ ಮಹಜರು ಮುಗಿಸಿ ಮನೆಯಿಂದ ಹೊರಗೆ ಬರುವಾಗ ಆರೋಪಿ ಪವಿತ್ರಾ ಸಹ ನಗುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.