ಅಧಿಕಾರಿಗಳ ಮುಂದೆ ಸತ್ಯ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ; ಇಲ್ಲಿವರೆಗೆ ಎಷ್ಟು ಗೊ ತ್ತಾ

 

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದು ವಿಚಾರಣೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಮಹಿಳಾ ಪೊಲೀಸ್ ಅಧಿಕಾರಿ ಸುಮನ್ ಡಿ ಪೆನ್ನೇಕರ್ ಮತ್ತು ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನು ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಿದರು. ಇದಕ್ಕೂ ಮುನ್ನ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಸಂಪೂರ್ಣವಾಗಿ ವೈದ್ಯಕೀಯ ತಪಾಸಣೆ ಮಾಡಲಾಯಿತು.

ಮಹಿಳಾ ಪೊಲೀಸ್ ಅಧಿಕಾರಿಗಳ ಬೆಂಗಾವಲಿನಲ್ಲಿ ಅವರನ್ನು ಇಲ್ಲಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಪ್ರಜ್ವಲ್ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಅವರನ್ನು ಬಂಧಿಸಿದೆ. ಪ್ರಜ್ವಲ್ ವಿರುದ್ಧ ಇದುವರೆಗೆ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇಂದು ಮಧ್ಯಾಹ್ನ 3 ಗಂಟೆಗೆ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಲಿದೆ.

ಇದನ್ನು ಹೊರತು ಪಡಿಸಿ, ಕೃತ್ಯ ನಡೆದ ಸ್ಥಳಗಳಲ್ಲಿ ಬೆಡ್‌ ಶೀಟ್‌, ಬೆಡ್‌, ತಲೆದಿಂಬುಗಳನ್ನು ವಶಕ್ಕೆ ಪಡೆದಕೊಂಡು ಪರಿಶೀಲನೆ ನಡೆಸಲಾಗುತ್ತದೆ. ಅಲ್ಲದೆ ಎಸ್‌ಐಟಿಗೆ ಸಿಕ್ಕ ವಿಡಿಯೋಗಳನ್ನು ಆಧರಿಸಿ ಘಟನಾ ಸ್ಥಳದ ಸುತ್ತ ಇರುವ ಸಾಕ್ಷಿಗಳನ್ನು ಸಂಗ್ರಹ ಮಾಡಲಾಗುತ್ತದೆ. ವಿಡಿಯೋದಲ್ಲಿ ಕಾಣಿಸಿಕೊಂಡ ಗೋಡೆಯ ಬಣ್ಣ, ಬೆಡ್‌ ಶೀಟ್ ಬಣ್ಣ, ತಲೆದಿಂಬಿನ ಬಣ್ಣಗಳನ್ನು ಸಂಗ್ರಹ ಮಾಡಲಾಗುತ್ತದೆ. ಇವೆಲ್ಲವನ್ನು ತಾಳೆ ಮಾಡಿಕೊಂಡು ಆರೋಪಕ್ಕೆ ಆಧಾರವನ್ನು ನೀಡಿ ಕೋರ್ಟಿಗೆ ಹಾಜರುಪಡಿಸಲಾಗುತ್ತದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.