ನನ್ನ ಮನೆ‌ ದೇವರು ಬಿಡುಗಡೆ ಆದ್ರು ಎಂದು ಸಂತೋಷ ವ್ಯಕ್ತಪಡಿಸಿದರ‌ ರಚಿತಾ ರಾಮ್, ವಿಜಯಲಕ್ಷ್ಮಿ ಗರಂ

 
 ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ಗೆ ಬೇಲ್ ಸಿಕ್ಕ ಬೆನ್ನಲ್ಲೇ ಡಿಂಪಲ್ ಕ್ವೀನ್ ರಚಿತಾ ರಾಮ್ ರಿಯಾಕ್ಷನ್ ಕೊಟ್ಟಿದ್ದಾರೆ. ಕಾಲಾಯ ತಸ್ಮೈ ನಮಃ ಎಂದು ವಿಡಿಯೋ ಹಂಚಿಕೊಂಡಿದ್ದಾರೆ.ದರ್ಶನ್ ಬೇಲ್ ಸಿಕ್ಕಿರುವ ಖುಷಿಯನ್ನು ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾಲವೇ ಎಲ್ಲದ್ದಕ್ಕೂ ಉತ್ತರ ಕೊಡಲಿದೆ ಎಂಬರ್ಥದಲ್ಲಿ ಕಾಲಾಯ ತಸ್ಮೈ ನಮಃ ಎಂದು ಅವರು ಹೇಳಿರುವ ತುಣುಕನ್ನು ಹಂಚಿಕೊಂಡಿದ್ದಾರೆ.
 ವಿಡಿಯೋದಲ್ಲಿ ನವಗ್ರಹ ಸಿನಿಮಾದ ಟ್ಯೂನ್ ಕೇಳಿ ಬರುತ್ತಿದೆ. ನಟಿಯ ವಿಡಿಯೋ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಜೈ ಡಿಬಾಸ್ ಎಂದಿದ್ದಾರೆ.ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ಇಂದು ಮಧ್ಯಂತರ ಜಾಮೀನು ಸಿಕ್ಕಿದೆ. ಹೈಕೋರ್ಟ್ ಅವರಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
 ಆರೋಗ್ಯ ತಪಾಸಣೆಗಾಗಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಈ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ ಕೆಲ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸಂಭ್ರಮಿಸಿದ್ದಾರೆ.ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ನಟಿ ರಚಿತಾ ರಾಮ್ ಬುಲ್ ಬುಲ್ ಚಿತ್ರದ ಮೂಲಕ ಹಿರಿತೆರೆ ಪ್ರವೇಶಿಸಿದರು. ಈ ಸಿನಿಮಾದಲ್ಲಿ ದರ್ಶನ್​ ಜೊತೆ ತೆರೆಹಂಚಿಕೊಂಡಿದ್ದರು. 
ರಚಿತಾ ಅವರು, ದರ್ಶನ್​​ ಬಗ್ಗೆ ಸಾಕಷ್ಟು ಗೌರವ ಇಟ್ಟುಕೊಂಡಿದ್ದಾರೆ. ತಮ್ಮ ಗುರು ಎಂದೇ ಭಾವಿಸಿದ್ದಾರೆ. ಆದ್ರೆ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾರೆ ಅನ್ನೋ ವಿಷಯ ನಟಿಗೆ ನಂಬಲಾಗಿರಲಿಲ್ಲ. ಇದೀಗ ದರ್ಶನ್​ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ರಚಿತಾ ರಾಮ್​​ ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದಾರೆ. <a href=https://youtube.com/embed/eVSt820FPuc?autoplay=1&mute=1><img src=https://img.youtube.com/vi/eVSt820FPuc/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ನಮಸ್ಕಾರ. ಈ ನೋಟ್‌ ಅನ್ನು ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು! ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ.
 ಇನ್ನು, ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.