ಬೆಂಗಳೂರಿಗೆ 'ಉಗಿದ' ರಶ್ಮಿಕಾ ಮಂದಣ್ಣ; RCB ಗೆ ಶ್ರೀವಲ್ಲಿ ಹಾಟ್ ಪ್ರಪೋಷನ್

 

ನಟಿ ರಶ್ಮಿಕಾ ಮಂದಣ್ಣ ಜೊತೆ ಆರ್​ಸಿಬಿ ಮ್ಯಾನೇಜ್​ಮೆಂಟ್​ ಕೈ ಜೋಡಿಸಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಹೊಸ ಪ್ರೋಮೋದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಅದನ್ನು ಕಂಡು ಆರ್​ಸಿಬಿ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಸಾವಿರಾರು ಕಮೆಂಟ್​ಗಳ ಮೂಲಕ ಫ್ಯಾನ್ಸ್​ ತಕರಾರು ತೆಗೆದಿದ್ದಾರೆ.

ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಕಪ್​ ಗೆದ್ದಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಗೆಲುವಿನ ಸಂಭ್ರಮಾಚರಣೆ ನಡೆಯುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ಆರ್​ಸಿಬಿ ಅಭಿಮಾನಿಗಳು ಗರಂ ಆಗಿದ್ದಾರೆ. ಅದಕ್ಕೆ ಕಾರಣ ಆಗಿರುವುದು ನಟಿ ರಶ್ಮಿಕಾ ಮಂದಣ್ಣ! ಅರೆ, ನಟಿ ರಶ್ಮಿಕಾ ಮಂದಣ್ಣ ಅವರಿಗೂ ಆರ್​ಸಿಬಿ ತಂಡಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಮೂಡುವುದು ಸಹಜ.  <a href=https://youtube.com/embed/ewBEku9jfJ8?autoplay=1&mute=1><img src=https://img.youtube.com/vi/ewBEku9jfJ8/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ವಿಷಯ ಏನೆಂದರೆ, ಐಪಿಎಲ್​ ಆರಂಭಕ್ಕೂ ಮುನ್ನ ಅನೇಕ ಸೆಲೆಬ್ರಿಟಿಗಳ ಜೊತೆ ಆರ್​ಸಿಬಿ ಸಹಯೋಗ ಮಾಡಿಕೊಂಡಿದೆ. ರಶ್ಮಿಕಾ ಮಂದಣ್ಣ ಜೊತೆ ಆರ್​​ಸಿಬಿ ಮ್ಯಾನೇಜ್​ಮೆಂಟ್​ ಕೈ ಜೋಡಿಸಿರುವುದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಇದು ಆರ್​ಸಿಬಿ ತೆಗೆದುಕೊಂಡ ಅತಿ ಕೆಟ್ಟ ನಿರ್ಧಾರ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ.

ಈಗಾಗಲೇ ಶಿವರಾಜ್​ಕುಮಾರ್​, ರಿಷಬ್​ ಶೆಟ್ಟಿ, ಕಿಚ್ಚ ಸುದೀಪ್​ ಮುಂತಾದ ಸೆಲೆಬ್ರಿಟಿಗಳು ಆರ್​ಸಿಬಿ ಅನ್​ಬಾಕ್ಸ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಸ್ಟಾರ್​ ಕಲಾವಿದರು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಟೀಮ್​ ಜೊತೆ ಕೈ ಜೋಡಿಸಿದ್ದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಸ್ಟಾರ್​ಗಳ ಪ್ರೋಮೋಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ರಶ್ಮಿಕಾ ಮಂದಣ್ಣ ಅವರನ್ನು ಅನ್​ಬಾಕ್ಸ್​ ವಿಡಿಯೋದಲ್ಲಿ ನೋಡಿದ ಆರ್​ಸಿಬಿ ಫ್ಯಾನ್ಸ್​ಗೆ ನಿರಾಸೆ ಆಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.