ಕನ್ನಡಿಗರಿಗೆ ನಾ ಯಿ ಮಾಂಸ ತಿನ್ನಿಸಿದ್ನ ರಜಾಕ್; ರೈಲಿನಲ್ಲಿ ಕೆಜಿ ತೂಕದ ಬೌಬೌ

 

ಬೇರೆ ರಾಜ್ಯದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್​ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ. ಪ್ರಕರಣ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ​ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ 12 ಜನರಿಗೆ ಮಾಂಸ ಮಾರಾಟದ ಲೈಸೆನ್ಸ್ ಕೊಟ್ಟಿದ್ದೇವೆ. 

ಅವರನ್ನ ಭೇಟಿ ನೀಡಿ ಮಾಹಿತಿ ನೀಡುವುದಕ್ಕೆ ಹೇಳಿದ್ದೇವೆ. ಒಂದು ವೇಳೆ ಇಂದು ಆ 12 ಜನ ಹಾಜರಾಗದಿದ್ದರೆ ನೋಟಿಸ್ ಕೊಡುತ್ತೇವೆ. ವಿಚಾರಣೆಗೆ ಬಾರದಿದ್ದರೆ 12 ಜನರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಸಂಬಂಧಿಸಿದಂತೆ ಇದೀಗ ಕಾಟನ್​ಪೇಟೆ ಠಾಣೆಯಲ್ಲಿ ಪ್ರತ್ಯೇಕವಾಗಿ 3 ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. <a href=https://youtube.com/embed/ZTxohNWVv5w?autoplay=1&mute=1><img src=https://img.youtube.com/vi/ZTxohNWVv5w/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಿರುವ ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಸರಬರಾಜು ಆಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ರಾಜಸ್ಥಾನದಿಂದ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್​ಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಈ ಹಿಲ್ಲೆಯಲ್ಲಿ ರೈಲ್ವೆ ಸ್ಟೇಷನ್​ನಲ್ಲಿ ದೊಡ್ಡ ಗಲಾಟೆಯಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್​ಕಾಲ್​ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.