ಜೈಲು ವಾಸ ಫಿಕ್ಸ್ ಎಂದ ತಕ್ಷಣ ರೇವಣ್ಣ ಮಾಧ್ಯಮಗಳ ಮುಂದೆ ಕಣ್ಣೀರು

 

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ  7 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್. ಡಿ. ರೇವಣ್ಣ  ಅವರನ್ನು ಬುಧವಾರ ಪರಪ್ಪನ ಅಗ್ರಹಾರ  ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲಾಗಿದೆ. ಎಸ್​ಐಟಿ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಯಿತು. 

ಮತ್ತೆ ಕಸ್ಟಡಿಗೆ ಎಸ್​ಐಟಿ ಅಧಿಕಾರಿಗಳು ಕೇಳದ ಕಾರಣ ಅವರನ್ನ 7 ದಿನಗಳ ಕಾಲ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೆಚ್​ಡಿ ರೇವಣ್ಣರನ್ನ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮೇ 4 ರಂದು ಬಂಧಿಸಲಾಗಿತ್ತು. ಕೋರ್ಟ್ ಅವರನ್ನ ನಾಲ್ಕು ದಿನಗಳವರೆಗೆ ಎಸ್ಐಟಿ ವಶಕ್ಕೆ ನೀಡಿತ್ತು. 

ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಂದು ಅವರನ್ನು 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಹೆಚ್. ಡಿ. ರೇವಣ್ಣ ಅವರನ್ನು ಮೇ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್ ಮಾಡಲಾಗಿದೆ. ಇದರಿಂದ ಬೇಜಾರಾಗಿ ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ. <a href=https://youtube.com/embed/cWLGAS2f44s?autoplay=1&mute=1><img src=https://img.youtube.com/vi/cWLGAS2f44s/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಕಣ್ಣೀರಿಟ್ಟಿದ್ದಾರೆ ಸಂತ್ರಸ್ಥ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನ ವಿಚಾರದಿಂದ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ಆಘಾತಕ್ಕೆ ಒಳಗಾಗಿದ್ದಾರೆ. 

ಅಲ್ಲದೆ ಈ ಪ್ರಕರಣ ಹೊರ ಬರುತ್ತಿದ್ದಂತೆ ಭವಾನಿ ರೇವಣ್ಣ ಅವರು ಎಲ್ಲೂ ಹೋಗದೆ ಮನೆಯಲ್ಲೇ ಇದ್ದಾರೆ. ಹೀಗಾಗಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಜೆಡಿಎಸ್ ನಾಯಕರು ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.