ಕಾಂತಾರ 2 ಮಾಡಲು ದೈವದ ಬಳಿ ಅಪ್ಪಣೆ ಕೇಳಿದ ರಿಷಭ್ ಶೆಟ್ಟಿ, ಆದರೆ ದೈವ ನುಡಿದ ಮಾತುಗಳೇ ಬೇರೆ

 

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಕಾಂತಾರ ಅಧ್ಯಾಯ 1 ಚಿತ್ರದ ಮೂಹೂರ್ತ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಈಗಾಗಲೇ ನೆರವೇರಿದೆ. ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇದೀಗ ರಿಷಬ್‌ ಅವರು ದೈವ ದರ್ಶನವನ್ನು ಪಡೆದಿದ್ದಾರೆ. 

ಅಲ್ಲಿ ಭಯ ಪಡಬೇಡ ನಾನಿದ್ದೇನೆ ಎಂದು ರಿಷಬ್ ಶೆಟ್ಟಿಗೆ ದೈವ ಅಭಯ ನೀಡಿದೆ. ರಿಷಬ್ ಶೆಟ್ಟಿಯನ್ನು ಮೈಸಂದಾಯ ದೈವ ಆಲಂಗಿಸಿ, ಕಾಂತಾರ ರೀತಿಯಲ್ಲೇ ರಿಷಬ್‌ಗೆ ಆಶೀರ್ವಾದ ನೀಡಿದೆ. ದೈವದ ಅಭಯ ಪಡೆಯಲೆಂದೇ ರಿಷಬ್‌ ಮಂಗಳೂರು ಗುರುಪುರ ವಜ್ರದೇಹಿ ಮಠದ ದೈವ ಕೋಲಕ್ಕೆ ಆಗಮಿಸಿದ್ದರು. 
ವಜ್ರದೇಹಿ ಮಠದ ಮೈಸಂದಾಯ ಕೋಲದಲ್ಲಿ ಸ್ವಯಂಪ್ರೇರಿತವಾಗಿ ಭಾಗವಹಿಸಿ ದೈವದ ಅಭಯ ಪಡೆದಿದ್ದಾರೆ. 

ಏನೇ ಎದುರಾದರೂ ಕುಗ್ಗಬೇಡ ಎಂದು ರಿಷಬ್‌ ಅವರಿಗೆ ಸೂಚನೆ ಕೊಟ್ಟಿದೆ. ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮಾಡಿ ಆಶೀರ್ವದಿಸಿದೆ. ದೈವಾರಾಧನೆಯ ಕಟ್ಟುಪಾಡು ಅಧ್ಯಾಯನ ಮಾಡಿಕೊಂಡು, ದೈವದ ನೆಲೆಯನ್ನ ಅರಿತುಕೊಂಡು ಸಮಾಜಕ್ಕೆ ತೋರಿಸಬೇಕು ಎಂಬ ಇಚ್ಛೆಯಿಂದು ರಿಷಬ್‌ ಕೋಲಕ್ಕೆ ಆಗಮಿಸಿದ್ದಾರೆ. ಸದ್ಯ ಕಾಂತಾರ: ಚಾಪ್ಟರ್ 1 ಸಂದರ್ಭದಲ್ಲೂ ದೈವದಿಂದ ಧನಾತ್ಮಕ ಪ್ರಕ್ರಿಯೆ ಸಿಕ್ಕಿರುವುದರಿಂದ ರಿಷಬ್ ಶೆಟ್ಟಿ ಫುಲ್ ಖುಷ್ ಆಗಿದ್ದಾರೆ. 

ಮೈಸಂದಾಯ ದೈವದ ಮುಂದೆ ರಿಷಬ್ ಶೆಟ್ಟಿ ತಲೆಭಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೆಲ್ಲಾ ನೋಡಿದರೆ ಕಾಂತಾರಕ್ಕಾಗಿ ಮತ್ತೆ ದೈವ ಪ್ರೇರಣೆ ಪಡೆಯಲು ರಿಷಬ್ ಗೆ ಮುನ್ಸೂಚನೆ ಸಿಕ್ತಾ ಎಂಬ ಪ್ರಶ್ನೆ ಮೂಡಿದೆ. ಈ ಹಿಂದೆ ರಿಷಬ್ ಕಾಂತಾರ ಹಿನ್ನಲೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.