ರಾಜ್ಯ ಜನತೆಗೆ ಬಂಪರ್ ಸಿಹಿಸುದ್ದಿ ಕೊಟ್ಟ ಸಿದ್ದರಾಮಯ್ಯ, ಕುಣಿದು ಕುಪ್ಪಳಿಸಿ ನಾಡಿನ ಪ್ರಜೆಗಳು

 

ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಸಕಾಲದಲ್ಲಿ ಪಾವತಿಸಿದವರಿಗೆ ಮಾತ್ರ ಈ ರಿಯಾಯಿತಿ ದೊರೆಯಲಿದೆ. ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉಭಯ ಸದನಗಳಲ್ಲಿ ಉತ್ತರ ನೀಡಿದ ಅವರು ಈ ವಿಚಾರವನ್ನು ಶುಕ್ರವಾರ ಪ್ರಕಟಿಸಿದ್ದಾರೆ.

ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಭರವಸೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರಲಿಲ್ಲ. ಆದರೆ ಬರ ಮತ್ತು ರೈತರ ಸಂಕಷ್ಟದ ಕಾರಣದಿಂದ ಬಡ್ಡಿ ಮನ್ನಾ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.2018ರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು.  <a href=https://youtube.com/embed/b0Slh-4zMbA?autoplay=1&mute=1><img src=https://img.youtube.com/vi/b0Slh-4zMbA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಕೃಷಿ ಸಾಲ ಮನ್ನಾ ಮಾಡಲಿಲ್ಲ. ವಿಧಾನಪರಿಷತ್‌ನಲ್ಲಿ ವಿ.ಎಸ್‌. ಉಗ್ರಪ್ಪ ಅವರು ಈ ವಿಷಯ ಪ್ರಸ್ತಾಪಿಸಿದಾಗ, ನಾವು ನೋಟು ಪ್ರಿಂಟ್‌ ಮಾಡುವ ಯಂತ್ರ ಇಟ್ಟಿಲ್ಲ ಎಂದು ಯಡಿಯೂರಪ್ಪ ಉತ್ತರ ಕೊಟ್ಟಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಲ್ಲ. ಅದರಿಂದ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಅವರು ಹೇಳಿದರು. ಪ್ರತ್ಯೇಕ ರಾಜ್ಯ ಬೇಡಿಕೆ ಏಕೀಕರಣಕ್ಕೆ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅಪಮಾನ. ಏಕೀಕರಣಕ್ಕಾಗಿ ರಾಜ್ಯದ ಉದ್ದಗಲ ಹಲವು ಜನ ಹೋರಾಟ ಮಾಡಿದ್ದರು ಎಂದು ಅವರು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ