ಏಕಾಏಕಿ ಲೈವ್ ಬಂದ್ ಅಭಿಮಾನಿಗಳ ಮುಂದೆ ಕಣ್ಣೀರು ಹಾಕಿದ ಸಿಂಗರ್ ಅರ್ಚನ ಉಡುಪ
May 17, 2025, 23:23 IST

ಕನ್ನಡದ ಖ್ಯಾತ ಗಾಯಕಿ, ನಿರೂಪಕಿ ಮತ್ತು ನಟಿ ಅರ್ಚನಾ ಉಡುಪ ಅವರು ಒಂದು ಮುಖ್ಯವಾದ ವಿಷಯಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಲವಾರು ಹಾಡುಗಳ ಮೂಲಕ ಮನರಂಜನೆ ನೀಡಿರುವ ಅರ್ಚನಾ ಬಗ್ಗೆ ಕೆಲವರು ಅಪಪ್ರಚಾರ ಮಾಡಿದ್ದಾರೆ. ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಇದೆ ಎಂದು ಗಾಸಿಪ್ ಹಬ್ಬಿಸಲಾಗಿದೆ.
ಅಲ್ಲದೇ, ಕ್ಯಾನ್ಸರ್ ಇದೆ ಎಂದೆಲ್ಲ ಮಾತನಾಡಿಕೊಳ್ಳಲಾಗಿದೆ. ಆದರೆ ಅದು ಯಾವುದೂ ನಿಜವಲ್ಲ. ಆ ಎಲ್ಲ ಗಾಸಿಪ್ಗಳಿಗೆ ಸಂಬಂಧಿಸಿದಂತೆ ಸ್ವತಃ ಅರ್ಚನಾ ಉಡುಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.ಎಲ್ಲರಿಗೂ ನಮಸ್ಕಾರ. ನನ್ನನ್ನು ತುಂಬ ದಿನಗಳಿಂದ ಕಾಡುತ್ತಿದ್ದ ಎರಡು ಮುಖ್ಯವಾದ ವಿಚಾರವನ್ನು ಇವತ್ತು ನಾನು ನಿಮ್ಮ ಮುಂದೆ ಹಂಚಿಕೊಳ್ಳಬೇಕು ಅಂತ ಈ ವಿಡಿಯೋ ಮಾಡುತ್ತಿದ್ದೇನೆ.
ಈ ವಿಡಿಯೋ ಮಾಡಬೇಕೋ ಬೇಡವೋ? ಇದರಿಂದ ಏನಾದರೂ ಉಪಯೋಗ ಆಗತ್ತೋ ಇಲ್ಲವೋ ಎಂಬ ಅನುಮಾನ ಮನಸ್ಸಿನಲ್ಲಿ ಇತ್ತು. ಆದರೆ ಬರುಬರುತ್ತ ಇದರ ಕಿರಿಕಿರಿ ಜಾಸ್ತಿ ಆಗುತ್ತಿರುವುದರಿಂದ ಈ ವಿಷಯವನ್ನು ನಿಮ್ಮ ಜೊತೆ ಹಂಚಿಕೊಳ್ಳಲೇಬೇಕು ಅಂತ ಅಂದುಕೊಂಡೆ’ ಎನ್ನುವ ಮೂಲಕ ಅರ್ಚನಾ ಉಡುಪ ಅವರು ಮಾತು ಆರಂಭಿಸಿದ್ದಾರೆ.ಮೂರು-ನಾಲ್ಕು ವರ್ಷಗಳ ಹಿಂದೆ ನಾನು ಒಂದು ಸಂದರ್ಶನ ನೀಡಿದ್ದೆ. ನನಗೆ 20 ವರ್ಷಗಳ ಹಿಂದೆ ಗಂಟಲಿನಲ್ಲಿ ಸಣ್ಣ ಸಮಸ್ಯೆ ಉಂಟಾಗಿ ತಿಂಗಳುಗಳ ಕಾಲ ನನಗೆ ಹಾಡಲು ಆಗುತ್ತಾ ಇರಲಿಲ್ಲ ಎಂಬ ವಿಷಯವನ್ನು ಆ ಸಂದರ್ಶನದಲ್ಲಿ ಹೇಳಿಕೊಂಡಿದ್ದೆ.
<a href=https://youtube.com/embed/zCe-UacCs58?autoplay=1&mute=1><img src=https://img.youtube.com/vi/zCe-UacCs58/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಆ ತೊಂದರೆಯಿಂದ ನಾನು ಹೇಗೆ ಹೊರಗೆ ಬಂದೆ? ಮತ್ತೆ ಹೇಗೆ ಹಾಡಲು ಶುರು ಮಾಡಿದೆ ಎಂಬುದನ್ನು ನಾಲ್ಕು ಜನಕ್ಕೆ ಉಪಯೋಗ ಆಗಲಿ ಅಂತ ಹಂಚಿಕೊಂಡಿದ್ದೆ. ಪ್ರಚಾರಕ್ಕಾಗಿ ಅವರು ಅದರ ಕ್ಲಿಪ್ ಮಾತ್ರ ಹಾಕಿದ್ದಾರೆ. ಪೂರ್ತಿಯಾಗಿ ಸಂದರ್ಶನ ನೋಡದೇ ಕೇವಲ ಚಿಕ್ಕ ತುಣುಕು ನೋಡಿಕೊಂಡು ನನಗೆ ಹಾಡಲು ಆಗುತ್ತಿಲ್ಲ, ಹಾಡುವುದು ನಿಲ್ಲಿಸಿದ್ದೇನೆ, ಗಂಟಲು ಹೊರಟು ಹೋಗಿದೆ ಅಂತ ತುಂಬ ಜನ ಹಬ್ಬಿಸಿದ್ದಾರೆ ಎಂದು ಅರ್ಚನಾ ಉಡುಪ ಹೇಳಿದ್ದಾರೆ.ನಾನು ಈಗ ಮೊದಲಿಗಿಂತ ಹೆಚ್ಚು ಬ್ಯುಸಿ ಆಗಿದ್ದೇನೆ.
ಮೊದಲಿಗಿಂತ ಹೆಚ್ಚು ಹಾಡುಗಳನ್ನು ಹೇಳುತ್ತಿದ್ದೇನೆ. ಇನ್ನೊಂದು ಮುಖ್ಯವಾದ ವಿಷಯ ಏನೆಂದರೆ, ಶಾರ್ಟ್ ಹೇರ್ ಕಟ್. ಇದನ್ನು ಯಾಕೆ ಮಾಡಿಸಿದ್ದು ಎಂದರೆ, ನಾನು ಒಂದು ಹೊಸ ಧಾರಾವಾಹಿಯಲ್ಲಿ ಪಾತ್ರ ಒಪ್ಪಿಕೊಂಡಿದ್ದೇನೆ. ಆ ಪಾತ್ರಕ್ಕೆ ಇದೇ ರೀತಿಯ ಹೇರ್ ಕಟ್ ಮಾಡಿಸಿಕೊಳ್ಳಬೇಕು ಅಂತ ಚಾನೆಲ್ನವರು ಹೇಳಿದ್ದರಿಂದ ನಾನು ಹೀಗೆ ಮಾಡಿಸಿಕೊಳ್ಳಬೇಕಾಯಿತು ಎಂದಿದ್ದಾರೆ ಅರ್ಚನಾ ಉಡುಪ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.