ಸ್ವಾಮೀಜಿಗಳಿಂದ ಹೊಸ ಸರ್ಕಾರದ ಭರವಸೆ; ಮೋದಿಜಿ ಕೈ ತಪ್ಪುತ್ತಾ 2024ರ ಚುನಾವಣೆ

 

ಯುಗಾದಿ ಹಬ್ಬದಂದು ನುಡಿಯುವ ಭವಿಷ್ಯ ಹೊರಬಿದ್ದಿದೆ. ಪ್ರತಿ ವರ್ಷದ ಯುಗಾದಿ ಹಬ್ಬದಂದು ಮಳೆ-ಬೆಳೆ ಜೊತೆ ರಾಜಕೀಯ ಭವಿಷ್ಯವನ್ನು ಸಹ ನುಡಿಯಲಾಗುತ್ತೆ. ಹೀಗಾಗಿ ಪ್ರತಿ ವರ್ಷ ಜನರು ಈ ಭವಿಷ್ಯಕ್ಕಾಗಿ ಕಾತರದಿಂದ ಕಾಯುತ್ತಾರೆ. ಅದರಲ್ಲೂ ಈ ಬಾರಿ ಲೋಕಸಭಾ ಚುನಾವಣೆ ಇರುವುದರಿಂದ ರಾಜಕೀಯ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿತ್ತು.

ಇದೀಗ ಸಿದ್ಲಿಂಗ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದು, ರಾಜಕೀಯವಾಗಿ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.ಮುಂಗಾರು ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ. ಇನ್ನು ಹಿಂಗಾರಿಗೆ ಮಳೆ ಕೈಕೊಡಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನು ರಾಜಕೀಯ ಭವಿಷ್ಯವನ್ನು ನೋಡುವುದಾದರೆ, ಕೇಂದ್ರ ಮತ್ತು ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಭವಿಷ್ಯ ನುಡಿದಿದ್ದಾರೆ.

ಈ ಮೂಲಕ ಕೇಂದ್ರದಲ್ಲಿ ನರೇಂದ್ರ ಮೋದಿ  ಅವರೇ ಈ ಬಾರಿಯೂ ಪ್ರಧಾನಮಂತ್ರಿ ಆಗಲಿದ್ದಾರೆ ಎನ್ನುವುದು ಭವಿಷ್ಯದ ಸಾರಾಂಶವಾಗಿದೆ. ಪ್ರತಿ ವರ್ಷವೂ ಯುಗಾದಿ ದಿನ ಭವಿಷ್ಯ ನುಡಿಯಲಾಗುತ್ತದೆ. ಮತ್ತು ಹೆಚ್ಚಿನ ಸಂದರ್ಭಗಳಲ್ಲಿ ಇಲ್ಲಿನ ಭವಿಷ್ಯ ನಿಜವಾಗುತ್ತದೆ ಎಂದೇ ಹೇಳಲಾಗಿದೆ. ಹೀಗಾಗಿ ಈ ವರ್ಷದ ಭವಿಷ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. <a href=https://youtube.com/embed/fjedRdB5MF0?autoplay=1&mute=1><img src=https://img.youtube.com/vi/fjedRdB5MF0/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಲೋಕಸಭಾ ಚುನಾವಣೆ ಇರುವುದರಿಂದ ಈ ಬಾರಿ ಯಾರು ಅಧಿಕಾರದ ಪಟ್ಟವನ್ನು ಹಿಡಿಯುತ್ತಾರೆ ಎಂಬ ಕುತೂಹಲ ಮೂಡಿಸಿತ್ತು. ಇದರಿಂದ ಯುಗಾದಿ ಅಮವಾಸ್ಯೆಯಂದು ಹಳ್ಳದಲ್ಲಿ ಕಟ್ಟಲಾಗುವ ಫಲದಿಂದ ಮಾರನೆ ದಿನ ಬೆಳಗ್ಗೆ ಅಂದರೆ ಯುಗಾದಿ ಹಬ್ಬದಂದು ಬಂದು ನೋಡಿದಾಗ ರಾಜಕೀಯ, ಮಳೆ, ಬೆಳೆ ಹಾಗೂ ರೈತರ ಭವಿಷ್ಯ ನಿರ್ಧಾರವಾಗಲಿದೆ. ಪ್ರಸಕ್ತ ವರ್ಷ ಕೇಂದ್ರ ಹಾಗೂ ರಾಜ್ಯ ನಾಯಕರ ಭವಿಷ್ಯ ಹೊರಬಿದ್ದಿದೆ. 

ಇದರಿಂದ ಯಾವುದೇ ಬದಲಾವಣೆ ಇಲ್ಲ ಎಂಬ ಮುನ್ಸೂಚನೆ ನೀಡಿದೆ. ಈಶಾನ್ಯ ದಿಕ್ಕಿಗೆ ಇಡಲಾಗಿದ್ದ ರಾಜಕೀಯ ಮೂರ್ತಿಗೆ ಯಾವುದೇ ಪೆಟ್ಟಾಗಿಲ್ಲ. ಇದರಿಂದ ರಾಜಕೀಯದಲ್ಲಿ ಯಾವುದೇ ಬದಲಾವಣೆಯಾಗದು ಎಂದು ನಂಬಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.