ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಅ ಪಘಾತ; ಓಡೋಡಿ ಬಂದ ಸಿನಿಮಾ ರಂಗ
ಬದುಕು ಕ್ಷಣಿಕ ಎನ್ನುವುದು ಇದಕ್ಕಾಗಿಯೇ ಇರಬೇಕು ಹೌದು ಕನ್ನಡ ಕಿರುತೆರೆಯಲ್ಲಿ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಮುಂತಾದ ಧಾರವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯತೆಯನ್ನು ಸಂಪಾದಿಸಿದ್ದ ನಟಿ ಪವಿತ್ರಾ ಜಯರಾಮ್ ಅವರು ಸಾವನ್ನಪ್ಪಿದ್ದಾರೆ.
ಮಂಡ್ಯ ತಾಲೂಕಿನ ಹನಕೆರೆಯವರಾದ ಪವಿತ್ರಾ ಅವರು ಹೈದರಾಬಾದ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದ ನಟಿ ಪವಿತ್ರಾ ಜಯರಾಮ್ ಅವರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಮಹೆಬೂಬ್‌ನಗರ ಜಿಲ್ಲೆಯ ಭೂತ್‌ಪುರ ಬಳಿಯ ಶೇರಿಪಲ್ಲಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪವಿತ್ರಾ ಜಯರಾಮ್ ಕೊನೆಯುಸಿರೆಳೆದಿದ್ದಾರೆ.
ಪವಿತ್ರಾ ಅವರು ಕರ್ನಾಟಕದಲ್ಲಿರುವ ತಮ್ಮ ಹುಟ್ಟೂರಿನಿಂದ ಹೈದರಾಬಾದ್‌ಗೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಭಾನುವಾರ ಮುಂಜಾನೆ ಪವಿತ್ರಾ ಅವರಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಕಾರು ರಸ್ತೆಯ ಬಲಭಾಗದಲ್ಲಿ ಹೈದರಾಬಾದ್‌ನಿಂದ ವನಪರ್ತಿಗೆ ಹೋಗುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪವಿತ್ರಾ ಜಯರಾಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಅವರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್ ಮತ್ತು ಸಹ ನಟ ಚಂದ್ರಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ತಕ್ಷಣ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಮಂಡ್ಯ ತಾಲೂಕಿನ ಹನಕೆರೆಯವರಾದ ಪವಿತ್ರಾ ಜಯರಾಮ್ ಅವರು ಕನ್ನಡದ ರೋಬೋ ಫ್ಯಾಮಿಲಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಎಂಟ್ರಿ ನೀಡಿದ್ದರು. ಆನಂತರ ಜೋಕಾಲಿ, ನೀಲಿ, ರಾಧಾ ರಮಣ ಮುಂತಾದ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.
ಸದ್ಯ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ತ್ರಿನಯನಿ ಧಾರಾವಾಹಿಯಲ್ಲಿ ತಿಲೋತ್ತಮಾ ಎಂಬ ಪಾತ್ರವನ್ನು ಪವಿತ್ರಾ ಜಯರಾಮ್ ಅವರು ನಿಭಾಯಿಸುತ್ತಿದ್ದರು. ಆ ಪಾತ್ರದ ಮೂಲಕ ತೆಲುಗು ವೀಕ್ಷಕರಿಗೆ ಸಾಕಷ್ಟು ಹತ್ತಿರವಾಗಿದ್ದರು ಪವಿತ್ರಾ. ಇದೀಗ ಇವರ ಸಾವಿಗೆ ಹಲವಾರು ಕಲಾವಿದರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.