ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಒಮ್ಮೆಲೇ ಉಕ್ಕಿ ಹರಿದ ಪ್ರೀತಿ, ಕುಮಾರಸ್ವಾಮಿ ಮಾತಿನಿಂದ ರೋಮಾಂಚನಗೊಂಡ ಭಟ್ರು

 

ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಕ್ರೀಡೋತ್ಸವದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಕೊನೆಗೆ ಜೈ ಶ್ರೀರಾಮ್ ಅಂತಾ ಘೋಷಣೆ ಮೊಳಗಿಸಿದ್ದಾರೆ.

ಕ್ರೀಡೋತ್ಸವದ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಈ ಕಾರ್ಯಕ್ರಮ ನನ್ನ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ. ಇಲ್ಲಿ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಈ ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ. ಉತ್ತಮ ಶಿಸ್ತಿನ ಬದಕನ್ನು ಕಲಿಸಲಾಗುತ್ತಿದೆ ಎಂದರು.

ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದ ದೊಡ್ಡ ನಷ್ಟವಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಬಾಲ್ಯದಲ್ಲಿ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ್ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತಿದ್ದೀರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. <a href=https://youtube.com/embed/eYdmNu-fMH8?autoplay=1&mute=1><img src=https://img.youtube.com/vi/eYdmNu-fMH8/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ನೀವೇಲ್ಲಾ ಯೋಚನೆ ಮಾಡಬಹುದು ಕುಮಾರಸ್ವಾಮಿ ಹಿಂದೆ ಒಂದು ರೀತಿ ಮಾತನಾಡುತ್ತಿದ್ದರು. ಈಗ ಕಾರ್ಯಕ್ರಮ ಭಾಗವಹಿಸುತ್ತಿದ್ದೀರಿ ಅಂತಾ ನೀವು ಯೋಚಿಸಿರಬಹುದು. ನನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇವತ್ತು ನನ್ನ ಕಣ್ಣು ತೆರೆದಿದೆ. ನನ್ನಲ್ಲಿ ತಪ್ಪುಗಳಾಗಿದೆ, ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಭಾಷಣದ ಕೊನೆಗೆ ಜೈ ಶ್ರೀರಾಮ್ ಘೋಷಣೆ ಕೂಗಿ ಕುಮಾರಸ್ವಾಮಿ ಭಾಷಣ ಮುಗಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇಲ್ಲಿ ಎಲ್ಲಾ ಸ್ತರದ ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡುತ್ತಿದ್ದಾರೆ. ಶಿಕ್ಷಣದ ಜೊತೆಗೆ ಮಾನಸಿಕ ದೈಹಿಕ ಸಾಮರ್ಥ್ಯವನ್ನು ಬೆಳಸುತ್ತಿದ್ದಾರೆ. ಆರ್‌ಎಸ್‌ಎಸ್‌ ಹಾಗೂ ಪ್ರಭಾಕರ್ ಭಟ್ ಅವರ ಕಾರ್ಯಕ್ರಮ ಬೇರೆ. ಆದರೆ ದೇಶದ ಅಭಿವೃದ್ಧಿಗೆ ಯಾವುದೇ ಸಂಘಟನೆ ಕೈ ಜೋಡಿಸಬೇಕು. ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಾಮಾನ್ಯ. 

ಎಲ್ಲಾ ರಾಜಕೀಯ ಪಕ್ಷದವರೂ ಟೀಕೆ ಮಾಡುತ್ತಾರೆ. ಕೆಲವೊಂದು ಸಮಯದಲ್ಲಿ ಟೀಕೇಗಳು ಸರ್ವೇ ಸಾಮಾನ್ಯ. ಭಟ್ ಅವರ ಕೊಡುಗೆ ಇಲ್ಲಿಗೆ ಭೇಟಿ ನೀಡಿದ ಬಳಿಕ ಗೊತ್ತಾಗಿದ್ದು ಎಂದು ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಹೊಗಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.