ವತೂ೯ರ್ ಸಂತೋಷ್ ಕೊನೆಗೂ ಜೈಲಿನಿಂದ ರಿಲೀಸ್, ಸಂತೋಷ್ ಗೆ ಸಿಕ್ತು ಜಾಮೀನು

 

 ಜನ ಮೆಚ್ಚಿದ ರೈತನಿಗೆ ಜಾಮೀನು ಮಂಜೂರಿಯಾಗಿದೆ. ಹೌದು ಹುಲಿ ಉಗುರನ್ನೊಳಗೊಂಡ ಆಭರಣ ಧರಿಸಿದ್ದ ಕಾರಣಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಭಾನುವಾರ ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್‌ ಗೆ ಜಾಮೀನು ಮಂಜೂರಾಗಿದೆ. 2ನೇ ಎಸಿಜೆಎಂ ಕೋರ್ಟ್ ನಿಂದ ಜಾಮೀನು ನೀಡಿದ್ದು, ನ್ಯಾಯಾಧೀಶರ ನರೇಂದ್ರ ಅವರಿಂದ ಆದೇಶ ಹೊರಬಿದ್ದಿದೆ. 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದ ಕೇಸಲ್ಲಿ ಜಾಮೀನು ಸಿಕ್ಕಿದ್ದು ವರ್ತೂರು ಸಂತೋಷ್ ಪರ‌ ವಕೀಲ ನಟರಾಜ್ ಅರಣ್ಯ ಅಧಿಕಾರಿಗಳ ಪ್ರಕ್ರಿಯಾ ವೈಫಲ್ಯದ ಬಗ್ಗೆ  ವಾದ ಮಂಡನೆ ಮಾಡಿದ್ದರು.  ಸದ್ಯ ಪರಪ್ಪನ ಅಗ್ರಹಾರದಲ್ಲಿ ವರ್ತೂರು ಸಂತೋಷ್‌ ಇದ್ದುಇಂದು ಸಂಜೆ ವೇಳೆಗೆ ವರ್ತೂರ್ ಸಂತೋಷ್ ಬಿಡುಗಡೆ ಸಾಧ್ಯತೆ ಇದೆ.

ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್‌ ತಮ್ಮ ಸರದಲ್ಲಿ ಹುಲಿ ಉಗುರಿನ ಪೆಂಡೆಂಟ್‌ನ್ನು ಧರಿಸಿ ಬಿಗ್‌ಬಾಸ್‌ ಮನೆ ಪ್ರವೇಶಿಸಿದ್ದರು. ಅ.8ರಂದು ಪ್ರಸಾರವಾದ ಬಿಗ್‌ಬಾಸ್‌ನ ಆರಂಭದ ಎಪಿಸೋಡ್‌ನಲ್ಲಿ ಅದು ಬಿತ್ತರವಾಗಿತ್ತು. ಅದನ್ನು ಗಮನಿಸಿದ ಖಾಸಗಿ ವ್ಯಕ್ತಿಯೊಬ್ಬರು ವರ್ತೂರು ಸಂತೋಷ್‌ ಹುಲಿ ಉಗುರನ್ನೊಳಗೊಂಡ ಆಭರಣ ಧರಿಸಿರುವ ಕುರಿತು ಮಾಹಿತಿ ನೀಡಿದ್ದರು. 

ಅದರಂತೆ ವರ್ತೂರು ಸಂತೋಷ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್‌ 9ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಬಂಧಿಸಿದ್ದರು.ಸಂತೋಷ್‌ ಬಂಧನದ ಬಳಿಕ ಅರಣ್ಯಾಧಿಕಾರಿಗಳು, ಸೆಲೆಬ್ರಿಟಿಗಳು ಕೂಡ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದು ಬೆಳಕಿಗೆ ಬಂದಿತ್ತು. ವರ್ತೂರು ಸಂತೋಷ್‌ ಬಂಧನಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಅರಣ್ಯಾಧಿಕಾರಿಗಳ ಮೇಲೆ ಅನುಮಾನ ಕೂಡ ವ್ಯಕ್ತವಾಗಿತ್ತು. ನೊಟೀಸ್‌ ನೀಡದೆ ಸಂತೋಷ್‌ ಅವರನ್ನು ಬಂಧಿಸಲಾಗಿದೆ ಎಂದು ಸುದ್ದಿ ಹಬ್ಬಿತ್ತು. ಅಂತೂ ಇಂತೂ ಹಳ್ಳಿಕಾರ್ ತಳಿಯ ಒಡೆಯ ಜಾಮೀನು ಮೂಲಕ ಹೊರಬಂದಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. <a href=https://youtube.com/embed/fCgIxQx-HDk?autoplay=1&mute=1><img src=https://img.youtube.com/vi/fCgIxQx-HDk/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">


( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.