ಮುನಿರತ್ನ ನಿವಾಸದಲ್ಲಿ ಡೀಲಿಂಗ್, ಸ್ಫೋ ಟಕ ವಿಡಿಯೋ ವೈರಲ್

 
 ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಮುನಿರತ್ನ ಆಡಿಯೋ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಗುತ್ತಿಗೆದಾರನ ದೂರು ಆಧರಿಸಿ, ನಿನ್ನೆ ಸಂಜೆಯೇ ಮುನಿರತ್ನರನ್ನ ಪೊಲೀಸರು ಬಂಧಿಸಿದ್ದರು. ಸದ್ಯ ಇದೆಲ್ಲದರ ಮಧ್ಯೆ ಮತ್ತೊಂದು ಆಡಿಯೋ ವೈರಲ್​ ಆಗಿದೆ. ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
ಈಗಾಗಲೇ ಆಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆಡಿಯೋದಲ್ಲಿ ಚಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿರುವುದು ಇದೆ. ಸದ್ಯ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಪೊಲೀಸರ ತನಿಖೆ ವೇಳೆಯಲ್ಲೂ ಈ ಆಡಿಯೋ ಬಗ್ಗೆ ಪ್ರಸ್ತಾಪವಾಗಿಲ್ಲ ಎನ್ನಲಾಗುತ್ತಿದೆ. <a href=https://youtube.com/embed/chWBPFkEXhA?autoplay=1&mute=1><img src=https://img.youtube.com/vi/chWBPFkEXhA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಪೂರ್ಣ ಘಟನೆ ನೋಡೋದಾದ್ರೆ ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಗುತ್ತಿಗೆದಾರನಿಂದ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವಯಾಲಿಕಾವಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರು ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ವೇಳೆ ಕೋಲಾರದ ಗಡಿಭಾಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು, ಶಾಸಕರ ಕಾರನ್ನು ಚೇಸ್ ಮಾಡಿದ ಪೊಲೀಸರು ಕಾರು ಅಡ್ಡಗಟ್ಟಿ ಅವರನ್ನು ಬಂಧಿಸಿದ್ದರು
ಇನ್ನು ಆರೋಪಿ ಶಾಸಕ ಮುನಿರತ್ನ ನಾನು ಆ ರೀತಿ ಮಾತಾಡಿಲ್ಲ ಅಂತಿದ್ದಾರೆ. ಆಡಿಯೋ ಬಗ್ಗೆ ದೃಢಪಡಿಸಿಕೊಳ್ಳಲು ಎಫ್​​ಎಸ್​ಎಲ್​ಗೆ ಕಳುಹಿಸಲಾಗುವುದು. ಒಂದು ವೇಳೆ ಧ್ವನಿ ಅವರಲ್ಲ ಅಂದರೆ ಏನ್ಮಾಡಬೇಕು ಮಾಡುತ್ತಾರೆ. ಒಂದು ವೇಳೆ ಧ್ವನಿ ಅವರದ್ದೇ ಎಂದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.