ಕಷ್ಟ ಬಂದಾಗ ಯಾರೂ ಬರಲ್ಲ ಸ್ವಾಮಿ; ನಮ್ಮ ದುರಾದೃಷ್ಟ ಅಷ್ಟೇ, ರಾಕ್ ಲೈನ್ ವೆಂಕಟೇಶ್

 
ಕೆಜಿಎಫ್, ಕಾಂತಾರ, ಚಾರ್ಲಿಯಂತಹ ಸಿನಿಮಾ ಮೂಲಕ ಇಡೀ ಭಾರತೀಯ ಚಿತ್ರರಂಗವನ್ನೇ ತನ್ನತ್ತ ಸೆಳೆದಿದ್ದ ಸ್ಯಾಂಡಲ್‌ವುಡ್ ಮೇಲೆ ಅದ್ಯಾರ ಕಣ್ಣು ಬಿತ್ತೋ ಏನೋ, ಈ ವರ್ಷ ಬಿಡುಗಡೆಯಾದ ಯಾವ ಸಿನಿಮಾಗಳೂ ಸರಿಯಾಗಿ ಒಂದು ವಾರ ಚಿತ್ರಮಂದಿರದಲ್ಲಿ ನಿಲ್ಲುತ್ತಿಲ್ಲ. ಸಿನಿಮಾಗೆ ಜನ ಬರ್ತಿಲ್ಲ ಅನ್ನೋದು ಒಂದು ಕಡೆಯಾದರೆ, ದರ್ಶನ್ ಬಂಧನ ಕೂಡ ಕನ್ನಡ ಚಿತ್ರರಂಗಕ್ಕೆ ಆಘಾತ ಕೊಟ್ಟಿದೆ.
ಇಂದು  ಕನ್ನಡ ಸಿನಿಮಾ ಕಲಾವಿದರ ಸಂಘದ ಕಚೇರಿಯಲ್ಲಿ ಪೂಜೆ, ಹೋಮ ಹಮ್ಮಿಕೊಳ್ಳಲಾಗಿದೆ. ಈ ಪೂಜೆಯನ್ನು ರಾಕ್‌ಲೈನ್‌ ವೆಂಕಟೇಶ್ ಮತ್ತು ನಟ ದೊಡ್ಡಣ್ಣ ಆಯೋಜಿಸಿದ್ದು, ದರ್ಶನ್‌ ಬಿಡುಗಡೆಗಾಗಿ ಹೋಮ ಮಾಡಲಾಗುತ್ತಿದೆ ಎಂದು ವರದಿಯಾಗಿತ್ತು. ಇದಕ್ಕೆ ಈಗ ರಾಕ್‌ಲೈನ್ ವೆಂಕಟೇಶ್ ಸ್ಪಷ್ಟನೆ ಕೊಟ್ಟಿದ್ದು, ಈ ಪೂಜೆ ದರ್ಶನ್‌ ಬಿಡುಗಡೆಗಾಗಿ ಮಾಡುತ್ತಿಲ್ಲ ಎಂದಿದ್ದಾರೆ.
ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದೆ, ಒಳ್ಳೆ ಸಿನಿಮಾಗಳಿಲ್ಲದೆ ಹಲವು ಸಿಂಗಲ್‌ ಸ್ಕ್ರೀನ್ ಸಿನಿಮಾ ಮಂದಿರಗಳು ಬಾಗಿಲು ಮುಚ್ಚುತ್ತಿವೆ. ಸಿನಿಮಾ ಕಲಾವಿದರು, ತಂತ್ರಜ್ಞರು ಕೂಡ ಸಂಕಷ್ಟಕ್ಕೆ ಸಿಲುಕಿದ್ದು ಚಿತ್ರರಂಗದ ಬೆಳವಣಿಗೆಗಾಗಿ ಹೋಮ ಮತ್ತಯ ಪೂಜೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ರಾಕ್‌ಲೈನ್ ವೆಂಕಟೇಶ್ ಮತ್ತು ಹಿರಿಯ ನಟ ದೊಡ್ಡಣ್ಣ ಸ್ಪಷ್ಟನೆ ಕೊಟ್ಟಿದ್ದಾರೆ. <a href=https://youtube.com/embed/WcSdJmohwuQ?autoplay=1&mute=1><img src=https://img.youtube.com/vi/WcSdJmohwuQ/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಕ್‌ಲೈನ್‌ ವೆಂಕಟೇಶ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದ ಕಟ್ಟಡದಲ್ಲಿ ಹೋಮ ಮಾಡಲಾಗುತ್ತದೆ. ನಟ ದರ್ಶನ್‌ ಜೈಲು ಸೇರಿದ್ದಾರೆ ಎನ್ನುವ ಕಾರಣಕ್ಕೆ ಈ ಪೂಜೆ ಮಾಡಲಾಗುತ್ತಿದೆ ಎಂದು ಅನೇಕರು ಅನುಮಾನಪಟ್ಟದ್ದಾರೆ. ಅದೆಲ್ಲಾ ಸುಳ್ಳು, ದರ್ಶನ್‌ಗಾಗಿ ಪೂಜೆ ಮಾಡುವುದಿದ್ದರೆ ಮನೆಯಲ್ಲಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ದರ್ಶನ್‌ ರಿಲೀಸ್‌ಗಾಗಿ ಪೂಜೆ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿರುವ ಬೆನ್ನಲ್ಲೇ ರಾಕ್‌ಲೈನ್‌ ವೆಂಕಟೇಶ್ ಹಾಗೂ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ. ಕಲಾವಿದರ ಸಂಘದಲ್ಲಿ ಪೂಜೆ ಹಾಗೂ ಹೋಮವನ್ನು ಯಾಕೆ ಮಾಡುತ್ತಿದ್ದೇವೆ ಅನ್ನೋದಕ್ಕೆ ಕ್ಲಾರಿಟಿ ಕೊಟ್ಟಿದ್ದಾರೆ. ಅಲ್ಲದೆ ದರ್ಶನ್‌ ಬಿಡುಗಡೆಗಾಗಿ ಮಾಡುತ್ತಿರುವ ಹೋಮ ಅಲ್ಲ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.