ಹಿಂದೂಗಳಿಂದ ಕೋಟಿಗಟ್ಟಲೆ ಆದಾಯ ಬರುವ ಶಬರಿಮಲೆಯಲ್ಲಿ ಯಾಕೆ ಅಭಿವೃದ್ಧಿ ಕಾಣುತ್ತಿಲ್ಲ, ಹಣವೆಲ್ಲ ಎಲ್ಲಿಗೆ ಹೋಗುತ್ತಿದೆ

 

ಕಳೆದ ಐದು ದಿನಗಳಿಂದ ಶಬರಿಮಲೆಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಆದರೆ, ಜನಸಂದಣಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇರಳದ ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ವಿಪರೀತ ಜನದಟ್ಟಣೆಯಿಂದಾಗಿ ಅನೇಕ ಯಾತ್ರಾರ್ಥಿಗಳು ಶಬರಿಮಲೆ ದೇವಸ್ಥಾನ ಮತ್ತು ಅಯ್ಯಪ್ಪನ ದರ್ಶನವನ್ನು ಪಡೆಯದೆ ಪಂದಳಂನಿಂದ ಹಿಂತಿರುಗುತ್ತಿದ್ದಾರೆ.

ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಹೋಗುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. <a href=https://youtube.com/embed/aULS83F5OF8?autoplay=1&mute=1><img src=https://img.youtube.com/vi/aULS83F5OF8/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4 ರಿಂದ 5 ಗಂಟೆಯ ನಡುವೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು ತಿಳಿದುಬಂದಿದೆ. 

ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು. 310 ಕೋಟಿ ಆದಾಯವಿದ್ದರೂ ,10 ತಾಸು ಸರತಿ ಸಾಲಿನಲ್ಲಿ ನಿಂತರೂ ದರ್ಶನ ಭಾಗ್ಯ ನಮ್ಮದಾಗುವುದಿಲ್ಲ ಈ ಅವ್ಯವಸ್ಥೆ ಏಕೆ ಎಂದು ಭಕ್ತಾಧಿಗಳು ಬೇಸರ ವ್ಯಕ್ತಪಡಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.