'ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯುವರಾಜ್ ಸಿಂಗ್' ,ಮೋದಿ ಜೊತೆ ಭರ್ಜರಿ ಚರ್ಚೆ ನಡೆಸುತ್ತಿರುವ ಕ್ರಿಕೆಟರ್

 

ಟೀಂ ಇಂಡಿಯಾ ಕ್ರಿಕೆಟಿಗ, 2011ರ ವಿಶ್ವಕಪ್ ನಾಯಕ ಯುವರಾಜ್ ಸಿಂಗ್ ಮುಂಬರುವ ಲೋಕಸಭಾ ಚುನಾವಣೆಗೆ ಮೊದಲು ಭಾರತೀಯ ಜನತಾ ಪಾರ್ಟಿಯಲ್ಲಿ ಸೇರುತ್ತಿದ್ದಾರಾ? ಪಂಜಾಬ್‌ನ ಗುರುದಾಸ್‌ಪುರ ಲೋಕಸಭಾ ಸ್ಥಾನದಿಂದ ಸ್ಪರ್ಧಿಸುವ ಅವಕಾಶವಿದೆ ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ನಡುವೆಯೇ ಯುವರಾಜ್‌ ಇತ್ತಿಚೇಗೆ ಸಚಿವ ನಿತಿನ್‌ ಗಡ್ಕರಿಯನ್ನ ಭೇಟಿ ಮಾಡಿದ್ದಾರೆ. ಆದರೆ ಬಿಜೆಪಿ ಸೇರ್ಪಡೆ, ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯುವರಾಜ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಯುವರಾಜ್ ಮತ್ತು ಅವರ ತಾಯಿ ಶಬ್ನಮ್ ಸಿಂಗ್ ಅವರು ಶುಕ್ರವಾರ, ಫೆಬ್ರವರಿ 9 ರಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿಯಾಗಿದ್ದರು. <a href=https://youtube.com/embed/yEayb1QoEg4?autoplay=1&mute=1><img src=https://img.youtube.com/vi/yEayb1QoEg4/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಯುವರಾಜ್ ಸಿಂಗ್, ತಾಯಿಯೊಂದಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 2019ರ ಏಕದಿನ ವಿಶ್ವಕಪ್​​​ಗೂ ಮುನ್ನವೇ ಯುವರಾಜ್ ಸಿಂಗ್, ಎಲ್ಲಾ ಮಾದರಿಯ ಕ್ರಿಕೆಟ್​​ಗೆ ವಿದಾಯ ಘೋಷಿಸಿದ್ದರು. ಆದರೆ ಇದುವರೆಗೂ ಯುವರಾಜ್ ಸಿಂಗ್, ಎಲ್ಲೂ ರಾಜಕೀಯ ಸೇರ್ಪಡೆ ಬಗ್ಗೆ ಇಂಗಿತ ವ್ಯಕ್ತಪಡಿಸಿಲ್ಲ.

ಆದರೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯುವರಾಜ್ ಗುರುದಾಸ್‌ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಪ್ರಚಾರವೂ ಜೋರಾಗಿದೆ. ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿಯಿಂದ ಸನ್ನಿ ಡಿಯೋಲ್ ಲೋಕಸಭೆಗೆ ಆಯ್ಕೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಯುವರಾಜ್ ಸಿಂಗ್ ಬಿಜೆಪಿ ಅಭ್ಯರ್ಥಿಯಾಗುವ ನಿರೀಕ್ಷೆಯಿದೆ. ಇತ್ತ ಟೀಂ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್ ಮತ್ತು ಹರ್ಭಜನ್ ಸಿಂಗ್ ಈಗಾಗಲೇ ರಾಜಕೀಯಕ್ಕೆ ಪ್ರವೇಶಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಗೌತಮ್ ಗಂಭೀರ್ ಪ್ರಸ್ತುತ ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದರೆ, ಹರ್ಭಜನ್ ಪಂಜಾಬ್‌ನಿಂದ ಎಎಪಿ ಸಂಸದರಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.