ಸರ್ಕಾರಿ ನೌಕರನಿಗೆ ಧ ಮಿ ಹಾಕಿದ ಪ್ರಖ್ಯಾತ ರಾಜಕಾರಣಿ; ಕೋರ್ಟ್ ನಲ್ಲಿ ಕಣ್ಣೀ ರಿಟ್ಟ ಎಂಜಿನಿಯರ್
ಶಿವಮೊಗ್ಗ ಜಿಲ್ಲೆಯ ಸಾಗರದ ಡಿವೈಎಸ್‌ಪಿ ನನಗೆ ಕಿರುಕುಳ ನೀಡುತ್ತಿದ್ದಾರೆ, ರಕ್ಷಣೆ ಒದಗಿಸಿ ಎಂದು ಮುಕ್ತ ನ್ಯಾಯಾಲಯದಲ್ಲಿ ಮನವಿ ಮಾಡಿದ್ದ ಕೆಪಿಟಿಸಿಎಲ್‌ನ ಸಹಾಯಕ ಎಂಜಿನಿಯರ್ ಎಂ.ಜಿ.ಶಾಂತಕುಮಾರ ಸ್ವಾಮಿಗೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ಬಗ್ಗೆ ಆಕ್ಷೇಪಣೆ ಇದ್ದರೆ ಅದನ್ನು ಲಿಖಿತ ಅರ್ಜಿ ಮೂಲಕವೇ ಪರಿಹಾರ ಪಡೆಯುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಅಷ್ಟಕ್ಕೂ ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಪೊಲೀಸರು ಕಿರುಕುಳ ನೀಡುತ್ತಿದ್ದು, ದಯವಿಟ್ಟು ನನ್ನನ್ನು ಕಾಪಾಡಿ ಎಂದು ನ್ಯಾಯಾಲಯದ ಮುಂದೆ ಅಳಲು ತೋಡಿಕೊಂಡಿದ್ದ ಕೆಪಿಸಿಟಿಎಲ್‌ನ ಸಾಗರದ ವಿಭಾಗದ ಸಹಾಯಕ ಎಂಜಿನಿಯರ್ ಎಂ.ಜಿ.ಶಾಂತಕುಮಾರಸ್ವಾಮಿ ವಿರುದ್ಧ ಸರ್ಕಾರಿ ವಕೀಲರು ಗಂಭೀರ ಆರೋಪ ಮಾಡಿದ್ದಾರೆ.
ಶಾಂತಕುಮಾರ ಸ್ವಾಮೀಜಿ ಅವರು ಮಹಿಳೆಯೊಬ್ಬರಿಗೆ ಹಲವು ರೀತಿ ಕಿರುಕುಳ ನೀಡಿದ್ದಾರೆ. ಆ ಮಹಿಳೆ ದೂರು ನೀಡಿದ್ದು, ಅದರಲ್ಲಿ ಶಾಂತಕುಮಾರ ಸ್ವಾಮೀಜಿ ಆರೋಪಿಯಾಗಿದ್ದಾರೆ. ಅದರಿಂದಲೇ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂಬ ಪ್ರಕರಣ ಕುರಿತು ಮಾಹಿತಿ ಪಡೆಯಲು ಸೂಚಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠಕ್ಕೆ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು ಪ್ರಕರಣದ ಬಗ್ಗೆ ವಿವರಿಸಿದರು. ಅಲ್ಲದೆ, ಪ್ರಕರಣ ಕುರಿತು ಪೊಲೀಸರಿಂದ ಪಡೆದುಕೊಂಡ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಿದರು.
ಈ ಅಂಶ ಪರಿಗಣಿಸಿದ ನ್ಯಾಯಪೀಠ, ನಿಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ನೀವೇ ಹಿಂಪಡೆದುಕೊಂಡಿದ್ದೀರಿ. ಈ ನ್ಯಾಯಾಲಯದ ಮುಂದೆ ಯಾವುದೇ ಪ್ರಕರಣ ಇಲ್ಲ. ಇದರಿಂದ ನ್ಯಾಯಾಲಯವು ಯಾವುದೇ ಕ್ರಮ ಜರುಗಿಸಲು ಸಾಧ್ಯವಿಲ್ಲ. ನಿಮ್ಮ ವಿರುದ್ಧದ ಪ್ರಕರಣವನ್ನು ಪ್ರಶ್ನಿಸಿ ನೀವು ಹೈಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಿ. ಅದರಲ್ಲಿ ನಿಮ್ಮ ಎಲ್ಲಾ ಅಳಲು ವಿವರಿಸಿ. ಅದನ್ನು ನ್ಯಾಯಾಲಯ ಪರಿಗಣಿಸಿ ವಿಚಾರಿಸಲಿದೆ ಎಂದು ತಿಳಿಸಿತು.
ಮಂಗಳವಾರ ನ್ಯಾಯಪೀಠದ ಮುಂದೆ ಹಾಜರಾಗಿದ್ದ ಶಾಂತಕುಮಾರ ಸ್ವಾಮಿ, ''ನನಗೆ ವಿವಾಹ ನಿಶ್ಚಯವಾಗಿ ರದ್ದಾಗಿತ್ತು. ನಂತರ ಸುಳ್ಳು ಪ್ರಕರಣ ದಾಖಲಿಸಿ, ನನ್ನಿಂದ ಹಣ ಸುಲಿಯಲು ಸ್ಥಳೀಯ ಕಾಂಗ್ರೆಸ್ ಶಾಸಕರು ಮತ್ತು ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದನ್ನು ರೆಕಾರ್ಡ್ ಮಾಡಿ, ನಾನು ಲೋಕಾಯುಕ್ತಕ್ಕೆ ದೂರು ನೀಡಿದ್ದೆ ಎಂದು ದೂರಿದ್ದರು.
ಅಲ್ಲದೇ, ಲೋಕಾಯುಕ್ತಕ್ಕೆ ದೂರು ನೀಡಿದ್ದೀಯಾ ಎಂದು ಸಾಗರದಲ್ಲಿ ಇರಲು ನನ್ನನ್ನು ಬಿಡುತ್ತಿಲ್ಲ. ಸಾಗರದ ಡಿವೈಎಸ್‌ಪಿ ನನ್ನನ್ನು ದಂಡಿಸಿದ್ದಾರೆ. ಗಾಂಜಾ ಪ್ರಕರಣದ ಜೊತೆಗೆ ತಕ್ಷಣ ಬೇರೆ ಬೇರೆ ಸೆಕ್ಷನ್ ಹಾಕಿದ್ದಾರೆ. ನ್ಯಾಯಾಲಯ ಬಿಟ್ಟು ಹೊರಗಡೆ ಹೋದರೆ ನಾಳೆ ರೌಡಿಶೀಟರ್ ತೆರೆಯುತ್ತಾರಂತೆ. ಎನ್‌ಕೌಂಟರ್ ಮಾಡುವುದಾಗಿ ರಿವಾಲ್ವರ್ ತೋರಿಸುತ್ತಾರೆ. ನಾನು ನ್ಯಾಯಾಲಯ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ'' ಎಂದು ಶಾಂತಕುಮಾರ ಸ್ವಾಮಿ ಕೈ ಮುಗಿದು ನ್ಯಾಯಮೂರ್ತಿಗಳನ್ನು ಬೇಡಿಕೊಂಡಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.