'ಬಂಟ ಬ್ರಿಗೇಡ್' ಹೆಸರಿನ ಗ್ರೂಪ್ ನಲ್ಲಿ ಶೂದ್ರ ವರ್ಗದವರ ಬಗ್ಗೆ ಅಪಹಾಸ್ಯ

 | 
Yuu

ಜಾತಿ ವ್ಯವಸ್ಥೆ ಪರಿಪೂರ್ಣವಾಗಿ ನಾಶವಾಗಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಏಪ್ರಿಲ್ 26ರಂದು ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಪೈಕಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕೂಡ ಒಂದು. ಮತದಾನ ಪ್ರಕ್ರಿಯೆಗೆ 48 ಗಂಟೆಗಳಷ್ಟೇ ಬಾಕಿ ಇದೆ. 

ಈ ನಡುವೆ ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಮತ ಹಾಕುವಂತೆ ಬಂಟ ಬ್ರಿಗೇಡ್ ಹೆಸರಲ್ಲಿ ಕರಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿಯನ್ನು ಉಲ್ಲೇಖಿಸಿ, ಶೂದ್ರ ವರ್ಗದ ಆಳಲು ಹೊರಟರೆ ನಾವು ಸಹಿಸಲು ಸಾಧ್ಯವೇ? ಎಂಬಂತಹಾ ಹಲವು ಅಂಶಗಳನ್ನು ಒಳಗೊಂಡಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ತಿಳಿಸಲಾಗಿದೆ.

ಈ ಕರಪತ್ರವು ಕರಾವಳಿಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ಬಾರಿ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಹಾಗೂ ಬಿಜೆಪಿಯಿಂದ ಬಂಟ ಸಮುದಾಯದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸ್ಪರ್ಧಿಸುತ್ತಿದ್ದಾರೆ. ಮೊದಲ ಬಾರಿಗೆ ಇಬ್ಬರು ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿಯುತ್ತಿರುವ ಕಾರಣ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಪ್ರಚಾರದ ವಿಚಾರದಲ್ಲಿ ಈ ಬಾರಿ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಅಬ್ಬರ ಕಾಣುತ್ತಿರುವುದರಿಂದ ಬಿಜೆಪಿಗೆ ಸಹಜವಾಗಿಯೇ ಸೋಲಿನ ಭಯ ಕಾಡುತ್ತಿದೆ ಎಂಬುದು ಕಾಂಗ್ರೆಸ್ ಪರ ಒಲವುಳ್ಳವರ ಅಭಿಪ್ರಾಯ. ಈ ಎಲ್ಲ ಬೆಳವಣಿಗೆಯ ನಡುವೆಯೇ ಬಂಟ ಬ್ರಿಗೇಡ್, ದಕ್ಷಿಣ ಕನ್ನಡ, ಮಂಗಳೂರು ಎಂಬ ಹೆಸರಿನಲ್ಲಿ ಕರಪತ್ರವೊಂದು ಹರಿದಾಡುತ್ತಿದೆ ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.