ವಿಮಾನ ಮೇಲೆ ಹಾರುವಾಗ ಕೆಲಕ್ಕೆ ಬಿದ್ದ ಟೈರ್; ಕನ್ನಡಿಗರ ಎದೆಯಲ್ಲಿ ಡವಡವ

 | 
Gg
ಜಪಾನ್‌ಗೆ ಹೊರಟಿದ್ದ ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ಸ್ಯಾನ್ ಫ್ರಾನ್ಸಿಸ್ಕೋದಿಂದ ಟೇಕಾಫ್ ಆಗಿತ್ತು. ಹೀಗೆ ಟೇಕಾಫ್‌ ಆದ ಕೆಲವೇ ನಿಮಿಷಗಳಲ್ಲಿ ವಿಮಾನದ ಟೈರ್‌ ಕಳಚಿಬಿದ್ದಿದೆ. ಪರಿಣಾಮ 2 ಕಾರುಗಳು ಜಖಂಗೊಂಡಿವೆ. ವಿಮಾನ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಟೈರ್‌ ಕಳಚಿ ಬೀಳುತ್ತಿರುವ ವೀಡಿಯೋ ಸೆರೆಯಾಗಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.
ಟೇಕ್‌ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನವು ತನ್ನ 6 ಟೈಯರ್‌ಗಳಲ್ಲಿ ಒಂದು ಕಳಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಮಾನವನ್ನು ಲಾಸ್ ಏಂಜಲೀಸ್‌ನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಈ ಸಂಬಂಧ ವಿಮಾನ ನಿಲ್ದಾಣದ ವಕ್ತಾರ ಡೌಗ್ ಯಾಕೆಲ್ ಅವರು, ಸ್ಯಾನ್ ಫ್ರಾನ್ಸಿಸ್ಕೊ ​​​​ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರುಗಳ ಮೇಲೆ ಟೈರ್‌ ಬಿದ್ದಿದೆ.
ಪರಿಣಾಮ ಕಾರುಗಳು ಜಖಂಗೊಂಡಿವೆ. ಆದರೆ ಯಾರಿಗೂ ಹಾನಿಯಾಗಿಲ್ಲ. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ 235 ಪ್ರಯಾಣಿಕರು ಮತ್ತು 14 ಸಿಬ್ಬಂದಿ ಇದ್ದರು. ಘಟನೆ ನಡೆದ ಕೂಡಲೇ ಅವರನ್ನು ಪ್ರಯಾಣಿಕರನ್ನು ಮತ್ತೊಂದು ವಿಮಾನಕ್ಕೆ ಸ್ಥಳಾಂತರಿಸಲಾಯಿತು ಎಂದು ಯುನೈಟೆಡ್ ತಿಳಿಸಿದೆ. ಬೋಯಿಂಗ್ 777ಗಳ ಎರಡು ಮುಖ್ಯ ಲ್ಯಾಂಡಿಂಗ್ ಗೇರ್‌ಗಳಲ್ಲಿ ತಲಾ 6 ಟೈರ್‌ಗಳನ್ನು ಹೊಂದಿವೆ. 
ಅವುಗಳಲ್ಲಿ ಒಂದು ಕಳಚಿಕೊಂಡಿದೆ ಎಂಬುದಾಗಿ ವರದಿಯಾಗಿದೆ. ವಿಮಾನಗಳು ಟೈರ್‌ಗಳನ್ನು ಕಳೆದುಕೊಳ್ಳುವುದು ಇದು ಅಪರೂಪದ ಘಟನೆಯಾಗಿದೆ ಎಂದು ವಾಯುಯಾನ ತಜ್ಞರು ಹೇಳಿದ್ದಾರೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ, ಎಡ ಮುಖ್ಯ ಲ್ಯಾಂಡಿಂಗ್ ಗೇರ್‌ನಲ್ಲಿನ ಆರು ಟೈರ್‌ಗಳಲ್ಲಿ ಒಂದು ಕಳಚಿ ಪಾರ್ಕಿಂಗ್ ಸ್ಥಳದಲ್ಲಿ ಕಾರಿನ ಮೇಲೆ ಬಿದ್ದಿದೆ. ಕಾರಿನ ಹಿಂಬದಿಯ ಕಿಟಕಿ ಒಡೆದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತದನಂತರ ಸಮೀಪದ ಬೇಲಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ವಕ್ತಾರ ಡೌಗ್ ಯಾಕೆಲ್ ತಿಳಿಸಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.