ಕಾವೇರಿ ಹೋರಾಟದಲ್ಲಿ ಹುಲಿಯಂತೆ ಘರ್ಜಿಸಿದ ಅಭಿಷೇಕ್ ಅಂಬರೀಶ್, ಮೆಚ್ಚುಗೆ ಪಟ್ಟ ರೈತರು

 | 
ಪು

ಸ್ಯಾಂಡಲ್ ವುಡ್ ನಟ ನಟಿಯರು ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯ ಭಾಗದ ರೈತರ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೆ, ನಟ ಅಭಿಷೇಕ್ ಅಂಬರೀಶ್ ಇಂದು ನೇರವಾಗಿ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಕಾವೇರಿ ಹೋರಾಟಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಂಬರೀಶ್ ಅವರು ತಮ್ಮ ಕೇಂದ್ರ ಮಂತ್ರಿ ಸ್ಥಾನವನ್ನೇ ತ್ಯಜಿಸಿದ್ದರು. 

ನಂತರ ಮಂಡ್ಯದ ಎಂಪಿ ಆಗಿರುವ ನಟಿ ಸುಮಲತಾ ಅಂಬರೀಶ್ ಕೂಡ ಹಲವು ದಿನಗಳಿಂದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದೀಗ ಅವರ ಪುತ್ರ ಅಭಿಷೇಕ್ ಕೂಡ ನೇರವಾಗಿ ಹೋರಾಟಕ್ಕೆ ಇಳಿಸಿದ್ದಾರೆ. ಕಾವೇರಿ ನೀರಿಗಾಗಿ ರೈತರು ಹಾಗೂ ಮಂಡ್ಯ ಜನರು ನಡೆಸುತ್ತಿರುವ ಹೋರಾಟಕ್ಕೆ ಅಭಿಷೇಕ್ ಅಂಬರೀಶ್ ಧ್ವನಿಯಾಗಿದ್ದಾರೆ. 

ಕಾವೇರಿ ನೀರನ್ನ ನಂಬಿ ನಾವೆಲ್ಲಾ ಇದ್ದೇವೆ. ನನ್ನಮ್ಮ ಸಂಸದೆ, ನನ್ನಪ್ಪ ಸೂಪರ್ ಸ್ಟಾರ್ ಅಂತ ನಾನು ಇಲ್ಲಿಗೆ ಬಂದಿಲ್ಲ.. ಕಾವೇರಿ ನೀರನ್ನ ಕುಡಿದು ಬೆಳೆದ ನಾವು ಅದನ್ನ ಕಾಪಾಡಿಕೊಳ್ಳಬೇಕು. ಸಮಸ್ಯೆ ಬಗೆಹರಿಯುವವರೆಗೂ ನಾನೂ ಹೋರಾಟದಲ್ಲಿ ಪಾಲ್ಗೊಳ್ಳುವೆ ಎಂದು ಅಭಿಷೇಕ್ ಅಂಬರೀಶ್ ಮಾತನಾಡಿದ್ದಾರೆ.

ನಂತರ ಮತ್ತೆ ಮಾತನಾಡಿದ ಅವರು, ನಾನು ಯುವಕನಾಗಿದ್ದೀನಿ, ಯಾವುದೇ ರಾಜಕೀಯ ದೃಷ್ಟಿಯಿಂದ ಇಲ್ಲಿ ಬಂದಿಲ್ಲ. ನಾನು ಚಿಕ್ಕದ್ದಿನಿಂದಾಗಲೂ ಕಾವೇರಿ ಹೋರಾಟ ನೋಡಿ ಬೆಳೆದವನು. ಅಪ್ಪಾಜಿ, ಅಮ್ಮ ಎಲ್ಲರೂ ಕಾವೇರಿ ಪರ ಹೋರಾಟ ಮಾಡಿದ್ದಾರೆ. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಕೆಲಸವನ್ನು ಅಮ್ಮ ಮಾಡುತ್ತಾರೆ. 

ನಮ್ಮ ನೀರು ಬಿಟ್ಟರೆ ಮುಂದೆ ಕುಡಿಯುವ ನೀರಿಗೂ ತೊಂದರೆ ಆಗುತ್ತದೆ. ನಮ್ಮ ಜನಕ್ಕೆ ನ್ಯಾಯ ಸಿಗಬೇಕು. ಈ ವಿಚಾರದಲ್ಲಿ ಯಾವಾಗಲೂ ಕನ್ನಡ ಚಿತ್ರರಂಗದ ಸಾಥ್‌ ನೀಡುತ್ತದೆ ಎಂದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.