ನಟ ದರ್ಶನ್ ಬಲಗಾಲಿಗೆ ಗಂಭೀರ ಪೆಟ್ಟು, ನಡೆದಾಡುವಾಗ ಕುಸಿದ ದಾಸ

 | 
B

ಕ್ರಾಂತಿ ಬಳಿಕ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಕಾಟೇರ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರಿನ ಸುತ್ತಮುತ್ತವೇ ಬಹುತೇಕ ಶೂಟಿಂಗ್ ನಡೆಯುತ್ತಿದೆ. ಈ ವೇಳೆ ಚಾಲೆಂಜಿಂಗ್‌ ಸ್ಟಾರ್ ಕಾಲಿಗೆ ಪೆಟ್ಟು ಬಿದ್ದಿದೆ. ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾಗಳಲ್ಲಿ 'ಕಾಟೇರ' ಕೂಡ ಒಂದು. 

ತರುಣ್ ಸುಧೀರ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಸಿನಿಮಾ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. 
ತರುಣ್ ಸುಧೀರ್ ಹಾಗೂ ದರ್ಶನ್ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. 70ರ ದಶಕದ ವೇಳೆ ನಡೆದ ಕಥೆಗೆ ಕಾಲ್ಪನಿಕ ಟಚ್ ಕೊಟ್ಟು 'ಕಾಟೇರ' ಸಿನಿಮಾ ಮಾಡಲಾಗುತ್ತಿದೆ. ಇಲ್ಲಿ ದರ್ಶನ್ ಪಕ್ಕಾ ಗ್ರಾಮೀಣ ಪ್ರದೇಶದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಹೀಗಾಗಿ 'ಕಾಟೇರ' ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಇದೇ ವೇಳೆ ದರ್ಶನ್ ಕಾಲಿಗೆ ಪಟ್ಟು ಮಾಡಿಕೊಂಡಿದ್ದಾರೆ. ದರ್ಶನ್ ಆಸ್ಪತ್ರೆಯಿಂದ ನಿರ್ಗಮಿಸುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದರ್ಶನ್ ಆಸ್ಪತ್ರೆಗೆ ಬಂದ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಈ ವೇಳೆ ದರ್ಶನ್ ಕುಂಟುತ್ತಲೇ ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಈ ವಿಡಿಯೋದಲ್ಲಿ ದರ್ಶನ್ ಕಾಲಿಗೆ ಪೆಟ್ಟು ಆಗಿರುವುದು ಎದ್ದು ಕಾಣುತ್ತಿದೆ. ಆಸ್ಪತ್ರೆಯಿಂದಲೇ ಹೊರಬಂದು ಅಭಿಮಾನಿಗಳಿಗೊಂದು ಸ್ಮೈಲ್ ಕೊಟ್ಟು ಕಾರು ಹತ್ತಿ ಹೊರಟಿದ್ದಾರೆ. ಇದೇ ವಿಡಿಯೋ ಇಟ್ಟುಕೊಂಡು ಅಭಿಮಾನಿಗಳು ಆದಷ್ಟು ಬೇಗ ಗುಣಮುಖರಾಗಿ ಬರುವಂತೆ ಹಾರೈಸುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ