ಮೊದಲನೇ ಪತ್ನಿ ಹಾಗೂ ಮಗನ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ನಟ ದಶ೯ನ್, ನೋಡಲು ಎರಡು ಕಣ್ಣು ಸಾಲಲ್ಲ

 | 
Bji
ಚಾಲೆಂಜಿಂಗ್ ಸ್ಟಾರ್‌' ದರ್ಶನ್ ತೂಗುದೀಪ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ತಿಂಗಳುಗಟ್ಟಲೇ ಜೈಲಿನಲ್ಲಿದ್ದರು. ಸದ್ಯ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡು ಹೊರಬಂದಿದ್ದಾರೆ. ಆರೋಗ್ಯದಲ್ಲಿ ಸಮಸ್ಯೆ ಇರುವ ಕಾರಣ, ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ಕೋರ್ಟ್‌ನಿಂದ ಅನುಮತಿ ಪಡೆದು ಮೈಸೂರಿನ ತಮ್ಮ ಫಾರ್ಮ್ ಹೌಸ್‌ನಲ್ಲಿ ಕುಟುಂಬದ ಜೊತೆಗೆ ಕಾಲಕಳೆಯುತ್ತಿದ್ದಾರೆ.
 ಪ್ರತಿ ವರ್ಷ ಸಂಕ್ರಾಂತಿ ಹಬ್ಬವನ್ನು ತಮ್ಮ ಫಾರ್ಮ್ ಹೌಸ್‌ನಲ್ಲಿ ಅದ್ದೂರಿಯಾಗಿ ಆಚರಿಸುವುದು ದರ್ಶನ್ ಅವರು ಬೆಳೆಸಿಕೊಂಡು ಬಂದಿರುವ ವಾಡಿಕೆ. ಈ ವರ್ಷ ಕೂಡ ಗ್ರ್ಯಾಂಡ್ ಆಗಿಯೇ ಹಬ್ಬ ಆಚರಿಸಿದ್ದಾರೆ."ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ" ಎಂದು ದರ್ಶನ್ ಪೋಸ್ಟ್ ಹಂಚಿಕೊಂಡಿದ್ದಾರೆ.
 ಅಲ್ಲದೆ, ದರ್ಶನ್ ಕುಟುಂಬದ ಒಂದಷ್ಟು ಅಪರೂಪದ ಫೋಟೋಗಳು ವೈರಲ್ ಆಗಿವೆ.ರೇಣುಕಾಸ್ವಾಮಿ ಕೇಸ್‌ನಿಂದಾಗಿ ದರ್ಶನ್ ಅವರು ಸೋಶಿಯಲ್ ಮೀಡಿಯಾದಿಂದ ದೂರ ಉಳಿದಿದ್ದರು. 33 ವಾರಗಳ ಬಳಿಕ ಪೋಸ್ಟ್‌ ಅವರು ಸಂಕ್ರಾಂತಿ ಹಬ್ಬದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.ದರ್ಶನ್ ಅವರ ವಿಜಯಲಕ್ಷ್ಮೀ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಫೋಟೋ ಹಂಚಿಕೊಂಡು ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಫೋಟೋಗಳಲ್ಲಿ ದರ್ಶನ್ ಸಹೋದರ ದಿನಕರ್ ಕೂಡ ಕಾಣಿಸಿಕೊಂಡಿದ್ದಾರೆ. ಕುಟುಂಬ ಸದಸ್ಯರೆಲ್ಲರನ್ನು ಒಂದೇ ಚೌಕಟ್ಟಿನಲ್ಲಿ ನೋಡಿ ಅಭಿಮಾನಿಗಳು ಫುಲ್‌ ಹ್ಯಾಫಿ ಆಗಿದ್ದಾರೆ.ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ದರ್ಶನ್ ಅಭಿಮಾನಿಗಳಿಗೆ ತುಂಬಾ ಇಷ್ಟವಾಗಿದೆ. ಹ್ಯಾಪಿ ಫ್ಯಾಮಿಲಿ ಎಂದು ಹಲವರು ಕಮೆಂಟ್ ಮಾಡುತ್ತಿದ್ದಾರೆ.  
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.