ಕಿಚ್ಚ ಸುದೀಪ್ ಜೊತೆ ನಟಿಸಿದ ನಟಿ ಅ ರೆಸ್ಟ್, ಓಡೋಡಿ ಬಂದ ಕರುನಾಡ ಚಕ್ರವರ್ತಿ

 | 
Nd
ಇತ್ತೀಚಿಗೆ ಈ ನಟಿ ಅದೆಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಹೊಸ ಸಿನೆಮಾ ಅಂತು ಬಿಡಿ. ಸೋಷಿಯಲ್ ಮೀಡಿಯಾ ಅಲ್ಲಿ ಕೂಡ ಕಾಣಿಸಿ ಕೊಂಡುಇರಲಿಲ್ಲ. ಇನ್ನೇನು ಬ್ಯುಸಿನೆಸ್ ಮೆನ್ ಮದುವೆ ಆಗಿ ಸೆಟಲ್ ಆಗ್ತಾರೆ ಅನ್ನೊ ಹೊತ್ತಿನಲ್ಲಿ ಕನ್ನಡ ನಟಿ ರನ್ಯಾ ರಾವ್‌ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ. 
ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿರುವ ಕಾರಣ ಈಕೆಯನ್ನು ಬಂಧಿಸಲಾಗಿದೆ. ದುಬೈನಿಂದ ಬೆಂಗಳೂರಿಗೆ ಆಗಮಿಸುವ ವೇಳೆಯಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ವನ್ಯಾ ರಾವ್‌ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್‌ ಜತೆ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದರು. ಗೋಲ್ಡನ್‌ ಸ್ಟಾರ್‌ ಗಣೇಶ್‌ ಜತೆ ಪಟಾಕಿ ಚಿತ್ರದಲ್ಲಿ ನಟಿಸಿದ್ದರು. ತಮಿಳಿನ ವಾಘಾ ಸಿನಿಮಾದಲ್ಲಿಯೂ ನಟಿಸಿದ್ದರು.
ಮಾರ್ಚ್‌ 3ರಂದು ದುಬೈ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಟಿ ರನ್ಯಾ ಆಗಮಿಸಿದ್ದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಟಿವಿ9 ವರದಿ ತಿಳಿಸಿದೆ. ಈಕೆ ಡಿಜಿಪಿ ರಾಮಚಂದ್ರ ರಾವ್‌ ಅವರ ಸಂಬಂಧಿಯಾಗಿದ್ದು, ಮಾಣಿಕ್ಯ ಸಿನಿಮಾದಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ.
ಮೂಲತಃ ರನ್ಯಾ ರಾವ್‌ ಚಿಕ್ಕಮಗಳೂರಿನವರು. 2014ರಲ್ಲಿ ಮಾಣಿಕ್ಯ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದರು. ಇದಾದ ಬಳಿಕ ಕಾಲಿವುಡ್‌ಗೆ ನೆಗೆದಿದ್ದರು. ತಮಿಳಿನ ವಾಘಾ ಸಿನಿಮಾದಲ್ಲಿ ದೊಡ್ಡಮಟ್ಟದ ಯಶಸ್ಸು ದೊರಕಲಿಲ್ಲ. 2017ರಲ್ಲಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ಜತೆ ಪಟಾಕಿ ಚಿತ್ರದಲ್ಲಿ ನಟಿಸಿದ್ದರು. ಇದಾದ ಬಳಿಕ ಇವರಿಗೆ ಯಾವುದೇ ಪ್ರಮುಖ ಆಫರ್‌ ಬರಲಿಲ್ಲ. ಇದೀಗ ಅಕ್ರಮ ಚಿನ್ನ ಸಾಗಾಣೆ ಮೂಲಕ ಸುದ್ದಿಯಲ್ಲಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.