ಬಹುಬೇಡಿಕೆಯ ನಟಿ ಮಯೂರಿ ಗಂಡ ಇನ್ನ್ ಇಲ್ಲ, ಕಣ್ಣೀರಿಟ್ಟ ಜನರು

 | 
ಕಿ

ಕೆಲ ವರ್ಷಗಳ ಹಿಂದೆ ಜನಪ್ರಿಯ ಬಾಲಿವುಡ್‌ ನಟ ಸುಶಾಂತ್ ಸಿಂಗ್‌ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿಗೆ ಖಿನ್ನತೆ ಕಾರಣ ಎಂದು ಹೇಳಲಾಗಿತ್ತು. ಇದೀಗ ಅವರದೇ ಹಾದಿಯಲ್ಲಿ ಮತ್ತೋರ್ವ ಯುವ ನಟ ಸಾಗಿದ್ದಾರೆ! ಮರಾಠಿ ಚಿತ್ರರಂಗದ ನಟ ಅಶುತೋಷ್‌ ಭಾಕ್ರೆ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ! ಅವರಿಗೆ 32 ವರ್ಷ ವಯಸ್ಸಾಗಿತ್ತು.

ಮರಾಠವಾಡ ಪ್ರಾಂತ್ಯದ ನಾಂದೇಡ್‌ನ ಗಣೇಶ್ ನಗರದಲ್ಲಿರುವ ನಿವಾಸದಲ್ಲಿ ಅಶುತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಸಂಜೆ ಅವರ ಮೃತ ದೇಹ ಪತ್ತೆಯಾಗಿದೆ ಎಂದ ಪೊಲೀಸ್ ಮೂಲಗಳು ತಿಳಿಸಿವೆ. ಅಂದಹಾಗೆ, ಮರಾಠಿ ನಟಿ ಮಯೂರಿ ದೇಶ್‌ಮುಖ್ ಅವರ ಪತಿಯಾಗಿರುವ ಅಶುತೋಷ್‌, ಭಕರ್ ಮತ್ತು ಇಚರ್ ತರ್ಲಾ ಪಕ್ಕಾ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. 

ಮಯೂರಿ ಕಿರುತೆರೆಯಲ್ಲಿ ಪ್ರಸಿದ್ಧಿ ಪಡೆದುಕೊಂಡಿದ್ದಾರೆ.ಅಶುತೋಷ್ ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಕೆಲ ಸಮಯದಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. 
ಜೊತೆಗೆ ಇತ್ತೀಚೆಗಷ್ಟೇ ವ್ಯಕ್ತಿಯೊಬ್ಬ ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಎಂಬ ವಿಷಯದ ಕುರಿತ ವಿಡಿಯೋವೊಂದನ್ನು ಅಶುತೋಷ್‌ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು ಎಂದು ತಿಳಿದುಬಂದಿದೆ. 

ನಾಂದೇಡ್‌ನ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಇವರ ಸಾವಿನಿಂದ ನಟಿ ಮಯೂರಿ ಅವರು ಮಾನಸಿಕ ಆರೋಗ್ಯ ಕಳೆದುಕೊಂಡಿದ್ದಾರೆ. ಅಲ್ಲದೆ ಇವರ ಸಾವಿಗೆ ಚಿತ್ರರಂಗದ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.