ದರ್ಶನ್ ಬಳಿಕ ದುನಿಯಾ ವಿಜಯ್ ಜೋಡಿ ಕೊ ಲೆ, ಬೆಚ್ಚಿಬಿದ್ದ ಕನ್ನಡಿಗರು
Nov 13, 2024, 07:11 IST
|
ಏನೋ ಮಾಡಲು ಹೋಗಿ ಇನ್ನೇನೋ ಮಾಡಿದಂತೆ ಆಯಿತು ಅನ್ನೋದಕ್ಕೆ ನಟ ವಿಜಯ್ ಅವರು ಸಾಕ್ಷಿ ಆಗಿದ್ದಾರೆ. ಹೌದು ಬೆಂಗಳೂರಿನ ನಗರದ ಹೊರವಲಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಡಬಲ್ ಮರ್ಡರ್ ಮಾಡಿರುವ ಆರೋಪಿಯನ್ನು ಈ ಹಿಂದೆ ಪ್ರಕರಣವೊಂದರಲ್ಲಿ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಜೈಲಿಂದ ಬಿಡಿಸಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಆದರೆ, ದುನಿಯಾ ವಿಜಿ ಅವರ ಆಶಯವನ್ನು ಕೊಲೆ ಪಾತಕಿ ವ್ಯರ್ಥ ಮಾಡಿದ್ದಾನೆ ಎನ್ನಲಾಗಿದೆ.
ಬಾಗಲೂರು ಡಬಲ್ ಮರ್ಡರ್ ಆರೋಪಿ ಸುರೇಶ್‌ಗೆ ಈ ಹಿಂದೆ ಪ್ರಕರಣವೊಂದರಲ್ಲಿ ಶ್ಯೂರಿಟಿ ಹಣ ನೀಡಿ ದುನಿಯಾ ವಿಜಯ್ ಬಿಡಿಸಿದ್ದರು. ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗೂ ರೇಪ್ ಕೇಸಲ್ಲಿ ಆರೋಪಿ ಸುರೇಶ್ ಜೈಲು ಸೇರಿದ್ದ. 10 ವರ್ಷ ಶಿಕ್ಷೆ ಅನುಭವಿಸಿದ್ದ ಅಪರಾಧಿಗೆ ಶ್ಯೂರಿಟಿ ಹಣ ನೀಡಲು ಯಾರೂ ಇರಲಿಲ್ಲ. ಈ ಸಮಯದಲ್ಲಿ ಒಂದಷ್ಟು ಅಪರಾಧಿಗಳಿಗೆ ತಲಾ ಮೂರು ಲಕ್ಷದಂತೆ ಶ್ಯೂರಿಟಿ ಹಣವನ್ನು ನಟ ವಿಜಯ್ ಕಟ್ಟಿದ್ದರು. ಈ ವೇಳೆ ಸುರೇಶ್‌ಗೂ ಕೂಡ ಮೂರು ಲಕ್ಷ ಶ್ಯೂರಿಟಿ ಹಣ ನೀಡಿ ಜೈಲಿಂದ ಬಿಡುಗಡೆಗೊಳಿಸಿದ್ದರು.
ಜೈಲಿಂದ ಬಿಡುಗಡೆ ಬಳಿಕ ಮಾರ್ಕೆಟ್‌ನಲ್ಲಿ ಕೊತ್ತಮಿರಿ ಸೊಪ್ಪು ಮಾರಾಟ ಮಾಡಿ ಸುರೇಶ್ ಜೀವನ ಸಾಗಿಸುತ್ತಿದ್ದ. ಸುರೇಶ್ ಸಂಬಂಧಿಯಿಂದ ಶೆಡ್‌ನಲ್ಲಿ ಕೆಲಸ ಪಡೆದುಕೊಂಡಿದ್ದ. ಗುಜರಿ ಮಾರುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಕೊಲೆಯಾದ ನಾಗೇಶ್ ಮತ್ತು ಮಂಜುನಾಥ್, ನೀನು ಕಳ್ಳ, ಕೊಲೆಗಾರ ಅಂತಾ ಹೀಯಾಳಿಸಿದ್ದರು. ಹೀಗಾಗಿ, ಈಚೆಗೆ ಇಬ್ಬರನ್ನೂ ಆರೋಪಿ ಸುರೇಶ್ ಕೊಲೆ ಮಾಡಿದ್ದ. ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಹೊರವಲಯ ನವಂಬರ್ 8 ರ ರಾತ್ರಿ ಜೋಡಿಕೊಲೆ ನಡೆದಿದೆ. ಎಸ್ಆರ್ಎಸ್ ಟ್ರಾವೆಲ್ಸ್ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್ ಮತ್ತು ಮಂಜುನಾಥ್ ಕೊಲೆಯಾದವರು. ಕೊಲೆಯಾದ ನಾಗೇಶ್ ಮತ್ತು ಮಂಜುನಾಥ್, ಸುರೇಶ್‌ಗೆ ಹೀಯಾಳಿಸಿದ್ದರು. ಇದರಿಂದ ಸಿಟ್ಟಾದ ಸುರೇಶ್ ಕೊಲೆಗೈದಿದ್ದಾನೆ.
ಈಗ ದುನಿಯಾ ವಿಜಯ್ ಅವರ ಆಶಯವನ್ನು ಸುರೇಶ್ ವ್ಯರ್ಥ ಮಾಡಿದ್ದಾನೆ. ಸದ್ಯ ಈ ವಿಚಾರ ಸಾಕಷ್ಟು ಬೇಸರ ಮೂಡಿಸಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.