ಸೌಜನ್ಯ ಕೇಸ್ ಬಳಿಕ ಧರ್ಮಸ್ಥಳಕ್ಕೆ ಮತ್ತೊಂದು ಮುಖಭಂಗ, ಕಂಗಾಲಾದ ಭಕ್ತರು

 | 
Hggf

ಕಾಶ್ಮೀರ ಫೈಲ್ಸ್, ದ ಕೇರಳ ಸ್ಟೋರಿ ಹೀಗೆ ನೈಜ ಘಟನೆ ಇಟ್ಟುಕೊಂಡು ಅನೇಕ ಸಿನಿಮಾಗಳು ಈಗಾಗಲೇ ಮೂಡಿಬಂದಿವೆ. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಆಗಿವೆ. ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. 

ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. 

ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆ ಆಗಿಲ್ಲ.
ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. 

ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ. ಇನ್ನು ಈ ಸಿನಿಮಾದಲ್ಲಿ ಯಾರ್ಯಾರು ಅಭಿನಯಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.