ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇಡೀ ರಾಜ್ಯಕ್ಕೆ 200 ಯೂನಿಟ್ ಕರೆಂಟ್ ಉಚಿತ ಎಂದ ಸಿದ್ದರಾಮಯ್ಯ, ಸಂಭ್ರಮಿಸಿದ ಪ್ರಜೆಗಳು

ಬೆಂಗಳೂರು: ಸ್ನೇಹಿತರೆ ನಮಸ್ಕಾರ, ಇವತ್ತು ಮಧ್ಯಾಹ್ನ ಮಾನ್ಯ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ನಾಯಕನಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ ರಾಜ್ಯದ ಜನತೆಗೆ ಕೊಟ್ಟ ಐದು ಗ್ಯಾರಂಟಿಗಳ ಬಗ್ಗೆ ಕೂಡ ಸ್ಪಷ್ಟತೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮೂಲ ಸೌಕರ್ಯಗಳನ್ನು ಉಚಿತವಾಗಿ ಕೊಡುವ ಬಗ್ಗೆ ಭರವಸೆ ನೀಡಲಾಗಿತ್ತು.
ಆದರೆ ಇದೀಗ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಐದು ಗ್ಯಾರಂಟಿಗಳಿಗೆ ಮತ್ತೊಮ್ಮೆ ಸ್ಪಷ್ಟತೆ ಕೊಟ್ಟು ಕರುನಾಡಿನ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹೌದು, ಇನ್ನು ರಾಜ್ಯದ ಜನತೆಗೆ ಕರೆಂಟ್ ಬಿಲ್ಲ್ ಉಚಿತವಾಗಿ ಸಿಗಲಿದೆ. ಜೊತೆಗೆ ಈ ಉಚಿತ ಕರೆಂಟ್ ಬಿಲ್ಲ್ ಸಿಗುವುದಕ್ಕೆ ಕೆಲವೊಂದು ನಿಯಮಗಳು ಕೂಡ ಜಾರಿಯಾಗಲಿದೆ ಎನ್ನುತ್ತಾರೆ ಸಿದ್ದರಾಮಯ್ಯ.
ರಾಜ್ಯದ ಜನರಿಗೆ ಐದು ಗ್ಯಾರಂಟಿ ಸಿಗಬೇಕೆಂದರೆ ಸಾಕಷ್ಟು ನಿಯಮಗಳು ಜಾರಿಯಾಗಲಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಗ್ಯಾರಂಟಿ ಇಡೀ ರಾಜ್ಯದ ಜನತೆಗೆ ಅನ್ವಯಿಸುತ್ತದೆ. ಆದರೆ ಸಾಕಷ್ಟು ನಿಯಮಗಳ ಮೂಲಕ ಉಚಿತ ನೀಡಲಾಗುತ್ತದೆ. ಮೊದಲನೇಯದಾಗಿ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಇದ್ದವರಿಗೆ ಈ ಉಚಿತ ಸೌಲಭ್ಯ ಸಿಗಲಿದೆ. (ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಆದಷ್ಟು ಬೆಂಬಲಿಸಿ ಪ್ರೀಯಾ ಮಿತ್ರರೆ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.