'ಯುಗಾದಿ ನಂತರ ರಾಜ್ಯದಲ್ಲಿ ದೊಡ್ಡ ಅನಾವುತ ನಡೆಯಲಿದೆ' ಧಾರ್ಮಿಕ ಮುಖಂಡನ ಸಾ.ವಾಗಲಿದೆ ಎಂದ ಕೋಡಿಶ್ರೀ
ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ.
ಅಲ್ಲದೇ ಇದರ ಜೊತೆಗೆ ಆಘಾತಕಾರಿ ಹೇಳಿಕೆಯನ್ನು ಸಹ ನೀಡಿದ್ದಾರೆ. ಮತಾದಂತೆ ಹೆಚ್ಚಾಗುತ್ತದೆ, ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಕೋಲಾರದ ಜಿಲ್ಲೆ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು.
ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು. ಗ್ಯಾರೆಂಟ್ ಗಳಿಂದ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು.
ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ ಆಗುತ್ತೆ. ಅನೇಕ ಸಾವು ನೋವುಗಳು ಆಗುತ್ತೆ. ಮತಾದಂತೆ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು. ದೈವ ನಂಬುವುದೊಂದೆ ಪರಿಹಾರ. ದೈವ ಮೊರೆ ಹೋಗ್ಬೇಕು ಎಂದು ಹೇಳಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.